‘ನನ್ನ ದೇವರನ್ನೇ ಕಳೆದುಕೊಂಡೆ’: ತಾಯಿ ಚೆನ್ನಮ್ಮ ನೆನೆದು ಗಳ ಗಳತೆ ಅತ್ತ ಹೆಚ್.ಡಿ. ರೇವಣ್ಣ
ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸ್ಥಳ ಪರಿಶೀಲಿಸಿದ ಶಾಸಕ ಹೆಚ್.ಡಿ. ರೇವಣ್ಣ ಭಾವುಕರಾಗಿದ್ದಾರೆ. "ನನ್ನ ದೇವತೆಯನ್ನೇ ಕಳೆದುಕೊಂಡೆ" ಎಂದು ಮಾಧ್ಯಮಗಳ ಮುಂದೆ ಗಳಗಳನೆ ಕಣ್ಣೀರು ಹಾಕಿದ್ದಾರೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ ಗುಣಮುಖ ಆಗ್ತಾರೆ ಎಂದಿದ್ದರು. ಆದರೆ ಅವರು ಬದುಕಿಬರಲಿಲ್ಲ ಎಂದು ಹೇಳುತ್ತಲೇ ಉಮ್ಮಳಿಸಿ ಬಂದ ದುಃಖ ತಡೆಯಲಾರದೆ ರೇವಣ್ಣ ಗದ್ಗರಿತರಾಗಿದ್ದಾರೆ.
ಹಾಸನ, ಜುಲೈ 19: ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ತಾಯಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನಡೆಯಲಿರುವ ಜಾಗವನ್ನು ಶಾಸಕ ಹೆಚ್.ಡಿ. ರೇವಣ್ಣ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅಮ್ಮನನ್ನು ನೆನೆದು ಅವರು ಭಾವುಕರಾಗಿದ್ದಾರೆ. ತಾಯಿ ಚೆನ್ನಮ್ಮ ನನಗೆ ದೇವತೆ ಸಮಾನ. ನನ್ನ ದೇವರನ್ನೇ ಕಳೆದುಕೊಂಡೆ ಎಂದು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಎಷ್ಟೋ ಜನರಿಗೆ ಅನ್ನ ಹಾಕಿದ ಕೈಅವರದು. ಕೊನೆಯದಾಗಿ ತಿರುಪತಿ ಪ್ರಸಾದ ಕೊಟ್ಟು ಮಾತನಾಡಿಸಿದ್ದೆ. ವೈದ್ಯರು ನಿನ್ನೆ ಬೆಳಗ್ಗೆ ಚೆನ್ನಮ್ಮ ಗುಣಮುಖ ಆಗ್ತಾರೆ ಎಂದಿದ್ದರು. ಆದರೆ ಅವರು ಬದುಕಿಬರಲಿಲ್ಲ ಎಂದು ಹೇಳುತ್ತಲೇ ಉಮ್ಮಳಿಸಿ ಬಂದ ದುಃಖ ತಡೆಯಲಾರದೆ ರೇವಣ್ಣ ಕಣ್ಣೀರಿಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 19, 2026 10:25 AM
Loading...
Unable to load recommendations.
Follow Us
