‘ಕ್ಷಮೆ ಕೇಳಿ ದೊಡ್ಡವರಾಗಿ’; ಕಮಲ್ಗೆ ಸಂದೇಶ ಕಳುಹಿಸಿದ ಕನ್ನಡದ ಹಿರಿಯ ನಿರ್ದೇಶಕ
ಕನ್ನಡದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದಾರೆ. ತಾವು ಸಂದೇಶ ಕಳುಹಿಸಿ ಈ ಬಗ್ಗೆ ಕೋರಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿ ಕಮಲ್ ಹಾಸನ್ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ ಎನ್ನಲಾಗಿದೆ.
ಕಮಲ್ ಹಾಸನ್ (Kmal Haasan) ಅವರು ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದು ಗೊತ್ತೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈಗ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈ ಬಗ್ಗೆ ಮಾತನಾಡಿದ್ದಾರೆ. ‘ಕಮಲ್ ಹಾಸನ್ಗೆ ನಾನು ಕ್ಷಮೆ ಕೇಳಿ ದೊಡ್ಡವರಾಗುವಂತೆ ಸಂದೇಶ ಕಳುಹಿಸಿದ್ದೆ’ ಎಂದು ಹೇಳಿದ್ದಾರೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

