‘ಕ್ಷಮೆ ಕೇಳಿ ದೊಡ್ಡವರಾಗಿ’; ಕಮಲ್​ಗೆ ಸಂದೇಶ ಕಳುಹಿಸಿದ ಕನ್ನಡದ ಹಿರಿಯ ನಿರ್ದೇಶಕ

Updated on: Jun 03, 2025 | 10:34 AM

ಕನ್ನಡದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದಾರೆ. ತಾವು ಸಂದೇಶ ಕಳುಹಿಸಿ ಈ ಬಗ್ಗೆ ಕೋರಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ, ಈ ವಿಚಾರಕ್ಕೆ ಸಂಬಂಧಿಸಿ ಕಮಲ್ ಹಾಸನ್ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ ಎನ್ನಲಾಗಿದೆ.

ಕಮಲ್ ಹಾಸನ್ (Kmal Haasan) ಅವರು ‘ಕನ್ನಡ ತಮಿಳಿನಿಂದ ಹುಟ್ಟಿದ್ದು’ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದು ಗೊತ್ತೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈಗ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈ ಬಗ್ಗೆ ಮಾತನಾಡಿದ್ದಾರೆ. ‘ಕಮಲ್ ಹಾಸನ್​ಗೆ ನಾನು ಕ್ಷಮೆ ಕೇಳಿ ದೊಡ್ಡವರಾಗುವಂತೆ ಸಂದೇಶ ಕಳುಹಿಸಿದ್ದೆ’ ಎಂದು ಹೇಳಿದ್ದಾರೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More