ಬರ ಪರಿಹಾರ ನಿಧಿಗಾಗಿ ದೆಹಲಿ ತೆರಳಿ ಮನವಿ ಮಾಡಲು ನೇತೃತ್ವವಹಿಸಿ ಎಂದರೆ ಅಶೋಕರಿಂದ ಪ್ರತಿಕ್ರಿಯೆ ಇಲ್ಲ: ಸಿದ್ದರಾಮಯ್ಯ

Updated on: Mar 05, 2024 | 4:31 PM

ತಾವು ಖುದ್ದು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಾಗಿದೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೋಗಿ ಮನವಿ ಮಾಡಿದ್ದಾರೆ, ಶಿವಕುಮಾರ್ ಚಲುವರಾಯಸ್ವಾಮಿ ಮತ್ತು ಕೃಷ್ಣ ಭೈರೇಗೌಡ ಜೊತೆಯಾಗಿ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ಆದರೆ ಬರ ಪರಿಹಾರ ಮಾತ್ರ ಇನ್ನೂ ಮರೀಚಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಬರ ನಿರ್ವಹಣೆ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೇಂದ್ರದಿಂದ ಬರ ಪರಿಹಾರ ನಿಧಿ ಇದುವರೆಗೆ ಬಿಡುಗಡೆಯಾಗದಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಮತ್ತು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು (HD Kumaraswamy) ತರಾಟೆಗೆ ತೆಗೆದುಕೊಂಡರು. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ನಾವು ಕೇಳುವ ರೀತಿ ಸರಿಯಿಲ್ಲ ಎಂದು ಅಶೋಕ ಹೇಳುತ್ತಾರೆ. ಸರಿ, ನಮ್ಮ ರೀತಿ ಸರಿಯಿಲ್ಲ, ನಿಮ್ಮ ನೇತೃತ್ವದಲ್ಲಿ ಹೋಗಿ ಕೇಂದ್ರದ ನಾಯಕರನ್ನು ಭೇಟಿಯಾಗೋಣ ಅಂತ ಹೇಳಿದರೆ ಅಶೋಕ ಅವರಿಂದ ಪ್ರತಿಕ್ರಿಯೆ ಇಲ್ಲ ಎಂದು ಸಿದ್ದಾರಾಮಯ್ಯ ಹೇಳಿದರು. ತಾವು ಖುದ್ದು ದೆಹಲಿಗೆ ತೆರಳಿ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದಾಗಿದೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೋಗಿ ಮನವಿ ಮಾಡಿದ್ದಾರೆ, ಶಿವಕುಮಾರ್ ಚಲುವರಾಯಸ್ವಾಮಿ ಮತ್ತು ಕೃಷ್ಣ ಭೈರೇಗೌಡ ಜೊತೆಯಾಗಿ ತೆರಳಿ ಕೇಂದ್ರದ ನಾಯಕರನ್ನು ಭೇಟಿಯಾಗಿದ್ದಾರೆ, ಆದರೆ ಬರ ಪರಿಹಾರ ಮಾತ್ರ ಇನ್ನೂ ಮರೀಚಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಈಗ ಬಿಜೆಪಿಯೊಂದಿಗೆ ಜೆಡಿಎಸ್ ಸೇರಿಕೊಂಡಿದೆ. ಕುಮಾರಸ್ವಾಮಿ ಸರ್ಕಾರದ ಅಪ್ರೋಚ್ ಸರಿಯಿಲ್ಲ ಎನ್ನುತ್ತಾರೆ. ಇವರ ಅಪ್ರೋಚ್ ಸರಿಯಿದ್ದರೆ ಹೋಗಿ ಬಿಡುಗಡೆ ಮಾಡಿಸಿಕೊಂಡು ಬರಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ತಾವು ಕಲಿತ ಶಾಲೆಗೆ 10 ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡಿ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More