ನ್ಯಾಯಮೂರ್ತಿ ಸಂತೋಷ್ ಹೆಗಡೆ ವರದಿಯ ಬಳಿಕ ಜನಾರ್ಧನರೆಡ್ಡಿ ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆ ಮಾಡಿದ್ದು: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 02, 2024 | 12:14 PM

ವರದಿಯಲ್ಲಿ ಹೆಗಡೆ ಅವರು ರೆಡ್ಡಿ ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಹೊರಟಿದ್ದಾರೆ ಅಂತ ಹೇಳಿದ್ದರು. ಅದನ್ನು ತಾನು ಅಸೆಂಬ್ಲಿಯಲ್ಲಿ ಪ್ರಸ್ತಾಪಿಸಿದಾಗ ಅಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ರೆಡ್ಡಿ ತನ್ನ ಮೇಲೆ ಮುಗಿಬಿದ್ದರು, ಅದಾದ ಬಳಿಕವೇ ತಾನು ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿದರು.

ಮೈಸೂರು: ಅಕ್ರಮ ಗಣಿಗಾರಿಕೆಯ ಆರೋಪಗಳು ತನ್ನ ಮೇಲಿದ್ದಂತೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಗಳಾಗಿರುವ ಸಂತೋಷ್ ಲಾಡ್ (Santosh Lad) ಮತ್ತು ಬಿ ನಾಗೇಂದ್ರ (B Nagendra) ಅವರ ಮೇಲೂ ಇವೆ, ಅವರ ವಿರುದ್ಧ ಯಾಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಭಟನೆ ಮಾಡಲ್ಲ ಎಂದು ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಎತ್ತಿರುವ ಪ್ರಶ್ನೆಗೆ ಸಿದ್ದರಾಮಯ್ಯ ಇಂದು ಮೈಸೂರಲ್ಲಿ ಖಡಕ್ ಉತ್ತರ ನೀಡಿದರು. ಸಂತೋಷ್ ಲಾಡ್ ಮತ್ತು ಬಿ ನಾಗೇಂದ್ರ ಅಕ್ರಮ ನಡೆಸಿರುವ ಬಗ್ಗೆ ರೆಡ್ಡಿಯವರಲ್ಲಿ ಸಾಕ್ಷ್ಯವಿದ್ದರೆ ಕೋರ್ಟ್ ಗೆ ಹೋಗಲಿ, ಅವರನ್ನು ತಡೆದವರು ಯಾರು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ತಾನು ರೆಡ್ಡಿ ವಿರುದ್ಧ ಪ್ರತಿಭಟನೆ ಮಾಡಿದ್ದು ಆಗಿನ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರ ವರದಿಯ ಆಧಾರದ ಮೇಲೆ. ತಮ್ಮ ವರದಿಯಲ್ಲಿ ಹೆಗಡೆ ಅವರು ರೆಡ್ಡಿ ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಹೊರಟಿದ್ದಾರೆ ಅಂತ ಹೇಳಿದ್ದರು. ಅದನ್ನು ತಾನು ಅಸೆಂಬ್ಲಿಯಲ್ಲಿ ಪ್ರಸ್ತಾಪಿಸಿದಾಗ ಅಗಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ರೆಡ್ಡಿ ತನ್ನ ಮೇಲೆ ಮುಗಿಬಿದ್ದರು, ಅದಾದ ಬಳಿಕವೇ ತಾನು ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲೇ ಅರ್ಧಕ್ಕೆ ಎದ್ದುಹೋಗದಂತೆ ಜನರಿಗೆ ಸಿದ್ದರಾಮಯ್ಯ ಮನವಿ ಮಾಡಿದರು!

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.