AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಸುಷ್ಮಾ ಚಕ್ರೆ
|

Updated on: Oct 07, 2026 | 4:38 PM

Share

ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾಗಲು ಸುಮಾರು 300 ಲೋಕಸಭಾ ಸಂಸದರು ಬಯಸಿದ್ದರು, ಆದರೆ ಅವರಿಗೆ ಭೇಟಿಗೆ ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವಿರೋಧ ಪಕ್ಷದ ಸಂಸದರು ಜಂತರ್ ಮಂತರ್‌ನತ್ತ ತೆರಳಲಿದ್ದಾರೆ ಎಂದು ತಿಳಿಸಿದರು ಮತ್ತು ಸಿಇಸಿ ವಿರುದ್ಧ ಪ್ರತಿಭಟನೆ ನಡೆಸಲು ನಿಗದಿತ ಪ್ರತಿಭಟನಾ ಸ್ಥಳವನ್ನು ತಲುಪಲು ಅನುಮತಿ ನೀಡಬೇಕೆಂದು ಆಗ್ರಹಿಸಿದರು. ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗಬೇಕೆಂದು ತಾವು ಬಯಸುವುದಾಗಿ ತಿಳಿಸಿದ ರಾಹುಲ್ ಗಾಂಧಿ, ಪ್ರತಿಯೊಂದು ಎಫ್‌ಐಆರ್ ನನಗೆ ಸಿಗುವ "ಪದಕ" ಎಂದು ಬಣ್ಣಿಸಿದರು.

ನವದೆಹಲಿ, ಅಕ್ಟೋಬರ್ 7: ಚುನಾವಣಾ ಆಯೋಗದ ವಿರುದ್ಧ ಆಕಾಶವಾಣಿ ಭವನದ ಬಳಿ ನಡೆದ ಪ್ರತಿಭಟನೆಯ ವೇಳೆ ತಮ್ಮ ಹಾಗೂ ಇತರ ಸಂಸದರ ವಿರುದ್ಧ ದೆಹಲಿ ಪೊಲೀಸರು ಎಫ್​ಐಆರ್ ದಾಖಲಿಸಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾನು ಎಫ್‌ಐಆರ್‌ಗಳಿಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವಿರುದ್ಧ ಈಗಾಗಲೇ ಸುಮಾರು 45 ಎಫ್‌ಐಆರ್‌ಗಳು ದಾಖಲಾಗಿವೆ ಎಂದು ತಿಳಿಸಿದ ಅವರು, ತಮ್ಮ ವಿರುದ್ಧದ ಎಫ್​ಐಆರ್​​ಗಳ ಸಂಖ್ಯೆ 100 ದಾಟಿದರೂ ನಾನು ಹೆದರುವುದಿಲ್ಲ ಎಂದು ಹೇಳಿದ್ದಾರೆ. ಪ್ರತಿಯೊಂದು ಎಫ್‌ಐಆರ್ ಅನ್ನು ನನಗೆ ಸಿಗುವ ಗೌರವದ ಪದಕ ಎಂದು ಭಾವಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಎಸ್​ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಹರಿಹಾಯ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More