AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗ್ರಾಮಾಂತರದಿಂದ ಯೋಗೇಶ್ವರ್ ಲೋಕಸಭೆಗೆ ಸ್ಪರ್ಧಿಸಲಿ ಅಂತ ಹೇಳಿದ್ದೆ: ಕುಮಾರಸ್ವಾಮಿ

ಬೆಂಗಳೂರು ಗ್ರಾಮಾಂತರದಿಂದ ಯೋಗೇಶ್ವರ್ ಲೋಕಸಭೆಗೆ ಸ್ಪರ್ಧಿಸಲಿ ಅಂತ ಹೇಳಿದ್ದೆ: ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 10, 2024 | 4:57 PM

Share

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿಯೇ ಎನ್​ಡಿಎ ಒಕ್ಕೂಟದ ಅಭ್ಯರ್ಥಿ ಎಂದು ನೇರವಾಗಿ ಹೇಳುವ ಬದಲು ಕುಮಾರಸ್ವಾಮಿಯವರು ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸುವ ಮತ್ತು ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಪ್ರಾಯ ಕೇಳುವ ಮಾತನ್ನಾಡುತ್ತಾರೆ.

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಸಿಪಿ ಯೋಗೇಶ್ವರ್ ಅವರಿಗೆ ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಆದರೆ, ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಲೋಕಾಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಡಾ ಸಿಎನ್ ಮಂಜುನಾಥ್ ಅವರ ಮನವೊಲಿಸುವಂತೆ ತನ್ನನ್ನು ಆಗ್ರಹಿಸುವ ಮೊದಲು ಯೋಗೇಶ್ವರ್ ಅವರೇ ಸ್ಪರ್ಧಿಸಲಿ ಎಂದು ಹೇಳಿದ್ದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚನ್ನಪಟ್ಟಣ ಉಪಚುನಾವಣೆಗೆ ಕ್ಷಣಗಣನೆ: ಅಖಾಡದಲ್ಲಿ ಹೆಚ್​​ಡಿಕೆ ಕುಮಾರಸ್ವಾಮಿ ಅಬ್ಬರ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More