ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಟಿವಿ9 ಶೃಂಗಸಭೆಯಲ್ಲಿ ಡಿಕೆ ಶಿವಕುಮಾರ್ ಮಾತು
WITT ಶೃಂಗಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ನ ಸಂಕಷ್ಟ ನಿವಾರಕ ಪಾತ್ರ, 24/7 ರಾಜಕೀಯ ಬದುಕು ಮತ್ತು ತಿಹಾರ್ ಜೈಲು ಅನುಭವ ಹಂಚಿಕೊಂಡಿದ್ದಾರೆ. ಅಸ್ಸಾಂನಲ್ಲಿ ಪಕ್ಷದ ಯುವ ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್‌ನ ಸಮಗ್ರ ನೀತಿಗಳನ್ನು ಒತ್ತಿಹೇಳಿದರು. ನಾನು ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ ಎಂದಿದ್ದಾರೆ.
ನವದೆಹಲಿ, ಮಾರ್ಚ್ 24: ನಾನು ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಟಿವಿ9 ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಶೃಂಗಸಭೆಯಲ್ಲಿ ಮಾತನಾಡಿದ ಅವರು, ನಾನು ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯಕ್ಕೆ ಬಂದವನು. ಎದುರಾಳಿಗಳ ಅಜೆಂಡಾ ಏನೆಂದು ನನಗೆ ಚೆನ್ನಾಗಿ ಗೊತ್ತಿದೆ. ನನ್ನ ಪರ ಯಾರೂ ಮಾತನಾಡುವ ಅಗತ್ಯವಿಲ್ಲ. ನನ್ನ ಪರವಾಗಿ 140 ಶಾಸಕರು ಇದ್ದಾರೆ. ಬೆಂಗಳೂರು, ಕರ್ನಾಟಕ ರಾಜ್ಯದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

