ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ನನ್ನನ್ನು ಹೇಗೆ ನಡೆಸಿಕೊಳ್ಳಲಾಯಿತು ಅನ್ನೋದನ್ನು ಶಿವಕುಮಾರ್ ಮರೆತಂತಿದೆ: ಹೆಚ್ ಡಿ ಕುಮಾರಸ್ವಾಮಿ

|

Updated on: Oct 26, 2023 | 2:05 PM

ಸಮ್ಮಿಶ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದಾಗ ತಾವು ವಿಧಾನಸಬೆಯಲ್ಲಿ ಬಿಜೆಪಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದು ನಿಜವೆಂದ ಕುಮಾರಸ್ವಾಮಿ, ಆದರೆ ಸರ್ಕಾರವನ್ನು ಅಸ್ಥಿರಗೊಳಿಸಿದ್ದು ಯಾರೆಂದು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೇಳಬೇಕು ಅಂದರು. ಬೆಳಗಾವಿ ಕಾಂಗ್ರೆಸ್ ನಾಯಕರ ನಡುವೆ ಸೃಷ್ಟಿಯಾದ ಸಂಘರ್ಷವನ್ನು ತಾನು ಹತ್ತಿಕ್ಕಬೇಕಿತ್ತೇ ಅಂತ ಕುಮಾರಸ್ವಾಮಿ ಪ್ರಶ್ನಿಸಿದರು.

ಬೆಂಗಳೂರು: ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಮತ್ತು ನಗರದ ಮತ್ತೊಂದು ಭಾಗದಲ್ಲಿ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ (HC Balakrishna); ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮೇಲೆ ತೀವ್ರ ವಾಗ್ದಾಳಿ ನಡೆಸಿದ ಬಳಿಕ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಅವರ ಮಾತು ಮತ್ತು ಆರೋಪಗಳಿಗೆ ಪ್ರತಿಕ್ರಿಯಿಸುವುದನ್ನು ನಿರೀಕ್ಷಿಸಲಾಗಿತ್ತು. ಜೆಡಿಎಸ್ ಕಚೇರಿಯಲ್ಲಿ ಸುದೀರ್ಘ ಸುದ್ದಿಗೋಷ್ಟಿ ನಡೆಸಿದ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಉತ್ತರ ನೀಡಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ತನ್ನನ್ನು ಶಿವಕುಮಾರ್ ಎಷ್ಟಿ ಕೆಟ್ಟದ್ದಾಗಿ ನಡೆಸಿಕೊಂಡರು ಅನ್ನೋದನ್ನು ವಿವರಿಸದ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕರ ಅಹವಾಲುಗಳನ್ನು ತನ್ನ ಮುಂದೆ ಇಸ್ಪೀಟ್ ಎಲೆಗಳಂತೆ ಬಿಸಾಡಿದರೆ ಮುಖ್ಯಮಂತ್ರಿಯಾಗಿದ್ದ ತಾನು ನೋವು ಮತ್ತು ಅವಮಾನವನ್ನು ಅವಡುಗಚ್ಚಿ ಸಹಿಸಿಕೊಂಡು ಆ ಅರ್ಜಿಗಳನ್ನು ಒಬ್ಬ ಭಿಕಾರಿಯ ಹಾಗೆ ಅರಿಸಿಕೊಂಡಿದ್ದಾಗಿ ಹೇಳಿದರು. ಸಮ್ಮಿಶ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದಾಗ ತಾವು ವಿಧಾನಸಬೆಯಲ್ಲಿ ಬಿಜೆಪಿಯನ್ನು ಹಿಗ್ಗಾಮುಗ್ಗಾ ಟೀಕಿಸಿದ್ದು ನಿಜವೆಂದ ಕುಮಾರಸ್ವಾಮಿ, ಆದರೆ ಸರ್ಕಾರವನ್ನು ಅಸ್ಥಿರಗೊಳಿಸಿದ್ದು ಯಾರೆಂದು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹೇಳಬೇಕು ಅಂದರು. ಬೆಳಗಾವಿ ಕಾಂಗ್ರೆಸ್ ನಾಯಕರ ನಡುವೆ ಸೃಷ್ಟಿಯಾದ ಸಂಘರ್ಷವನ್ನು ತಾನು ಹತ್ತಿಕ್ಕಬೇಕಿತ್ತೇ ಅಂತ ಕುಮಾರಸ್ವಾಮಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 26, 2023 02:04 PM