ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ: ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆ ಎಂದ ಸಚಿವ ಜಮೀರ್
ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಘಟನೆಯಿಂದಾಗಿ ಸಚಿವ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳು ಕೂಡ ಪೊಲೀಸರಿಗೆ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು, ಜನವರಿ 12: ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ದುಷ್ಕರ್ಮಿಗಳಿಂದ ಕ್ರೌರ್ಯ ಮೆರೆಯಲಾಗಿದೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್ (Zameer Ahmed), ಪ್ರಾಣಿಗಳ ಮೇಲೆ ಏನು ದ್ವೇಷ. ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ತೇವೆ. ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.