ಪೃಥ್ವಿಸಿಂಗ್ ಚಾಕು ಇರಿತ ಪ್ರಕರಣ; ಪೊಲೀಸರು ತನಿಖೆ ಮಾಡುತ್ತಿದ್ದಾರೆ, ನಾನು ಬ್ಯೂಸಿಯಾಗಿರುವೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಪೃಥ್ವಿಸಿಂಗ್ ಚಾಕು ಇರಿತ ಪ್ರಕರಣ; ಪೊಲೀಸರು ತನಿಖೆ ಮಾಡುತ್ತಿದ್ದಾರೆ, ನಾನು ಬ್ಯೂಸಿಯಾಗಿರುವೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 05, 2023 | 12:43 PM

ಚಾಕು ಇರಿತಕ್ಕೆ ಒಳಗಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೃಥ್ವಿಸಿಂಗ್ ಅಸಲಿಗೆ ಗೋಕಾಕ ಶಾಸಕ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಅವರ ಅಪ್ತನೆಂದು ಹೇಳಲಾಗಿದೆ. ನಿನ್ನೆ ಟಿವಿ9 ವರದಿಗಾರನೊಂದಿಗೆ ಮಾತಾಡಿದ್ದ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ತನ್ನ ಮತ್ತು ಪ್ರಕರಣದ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು.

ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿಸಿಂಗ್ ಚಾಕು ಇರಿತ ಪ್ರಕರಣ (Prithvi Singh stabbing case) ರಾಜಕೀಯ ಬಣ್ಣ ಪಡೆದಿಕೊಳ್ಳುವುದಕ್ಕೆ ಕಾರಣವಿಲ್ಲದಿಲ್ಲ. ಹಲ್ಲೆ ಬೆಳಗಾವಿ ಅಧಿವೇಶನ ಶುರುವಾಗುವ ಸಂದರ್ಭದಲ್ಲಾಗಿದೆ ಮತ್ತು ಹಲ್ಲೆ ನಡೆದ ಸ್ಥಳದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ಅವರ ಕಾರು ಕಾಣಿಸಿಕೊಂಡಿದೆ. ಇಂದು ಅಧಿವೇಶನ ಶುರುವಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಪೊಲೀಸ್ ಇಲಾಖೆ ಪ್ರಕರಣದ ತನಿಖೆ ನಡೆಸುತ್ತಿದೆ, ಅಧಿವೇಶನ ನಡೆಯುತ್ತಿರುವುದರಿಂದ ಬಹಳ ಬ್ಯೂಸಿಯಾಗಿದ್ದೇನೆ, ಸದನದಲ್ಲಿ ಪ್ರಕರಣದ ಬಗ್ಗೆ ಪ್ರಶ್ನೆ ಕೇಳಿದರೆ ಉತ್ತರಿಸುವುದಾಗಿ ಹೇಳಿದರು. ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಅವರು ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಆರೋಪ ಮಾಡುತ್ತಿರುವ ಬಗ್ಗೆ ಲಕ್ಷ್ಮಿ ಅವರಿಗೆ ಹೇಳಿದಾಗ, ಅವರು ಈಗಷ್ಟೇ ಅಧಿಕಾರವಹಿಸಿಕೊಂಡಿರುವುದರಿಂದ ಉತ್ಸಾಹ ಮತ್ತು ಆವೇಶದಲ್ಲಿ ಮಾತಾಡುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ