ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣವನ್ನೂ ಕೊಟ್ಟ ಕೇಂದ್ರ ಸಚಿವ

Edited By:

Updated on: Oct 23, 2026 | 12:54 PM

ಡಿ.ಕೆ.ಶಿವಕುಮಾರ್ ಅವರನ್ನು ತಾವು ಮುಖ್ಯಮಂತ್ರಿ ಎಂದು ಒಪ್ಪುವುದಿಲ್ಲ ಎಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಅವರ ಕನಕಪುರದ ಹಿನ್ನೆಲೆಯ ಪುಸ್ತಕ ಪ್ರದರ್ಶಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಕೆಶಿ ಅವರ ಕನಕಪುರದ ಇತಿಹಾಸ ಮತ್ತು ಹಿನ್ನಲೆಯ ಬಗ್ಗೆ ಪುಸ್ತಕವಿದ್ದು, ಇದನ್ನು ನಾನು ಬರೆದಿದ್ದಲ್ಲ. ಈ ಪುಸ್ತಕಕ್ಕಿಂತಲೂ ಹೆಚ್ಚಿನ ವರದಿಗಳು ತಮ್ಮ ಬಳಿ ಇವೆ ಎಂದೂ ಅವರು ಹೇಳಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 23: ಡಿಕೆ ಶಿವಕುಮಾರ್​​ ಅವರನ್ನು ತಾನು ಮುಖ್ಯಮಂತ್ರಿಯೆಂದು ಒಪ್ಪಲ್ಲ ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಡಿಕೆಶಿ ಅವರ ಕನಕಪುರದ ಇತಿಹಾಸ ಮತ್ತು ಹಿನ್ನಲೆಯ ಬಗ್ಗೆ ಪುಸ್ತಕವಿದ್ದು, ಇದನ್ನು ನಾನು ಬರೆದಿದ್ದಲ್ಲ. ಇದನ್ನು ಓದಿಬಿಟ್ಟರೆ ಅವರನ್ನು ರಾಜ್ಯದ ಸಿಎಂ ಎಂದು ಯಾರೂ ಒಪ್ಪಲು ಆಗಲ್ಲ. ಈ ಪುಸ್ತಕವನ್ನು ಯಾರೋ ಸುಮ್ಮನೆ ಬರೆದಿಲ್ಲ ಎಂದು ಹೇಳುತ್ತಲೇ ಅವರು ಪುಸ್ತಕವೊಂದನ್ನು ಪ್ರದರ್ಶಿಸಿದ್ದಾರೆ. ಈ ಪುಸ್ತಕಕ್ಕಿಂತಲೂ ಹೆಚ್ಚಿನ ವರದಿಗಳು ತಮ್ಮ ಬಳಿ ಇವೆ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More