ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ‘ಜಾಗ್ವಾರ್’ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದ ಚುರು ಜಿಲ್ಲೆಯ ಭಾನುಡಾ ಗ್ರಾಮದ ಬಳಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲಟ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಅವಶೇಷಗಳು ಪೈಲಟ್ ದೇಹದ ಜೊತೆಗೆ ಹೊಲವೊಂದರಲ್ಲಿ ಪತ್ತೆಯಾಗಿವೆ. ಮೃತದೇಹ ತೀವ್ರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಪೈಲಟ್ ಮತ್ತು ಇನ್ನೊಬ್ಬ ವ್ಯಕ್ತಿಯ ಗುರುತುಗಳನ್ನು ಸೇನೆ ಮತ್ತು ಸ್ಥಳೀಯ ಆಡಳಿತವು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.ಅಪಘಾತದಿಂದಾಗಿ ಹತ್ತಿರದ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಸ್ವತಃ ನಂದಿಸಲು ಪ್ರಯತ್ನಿಸಿದ್ದೇವೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ರಾಜಸ್ಥಾನ, ಜುಲೈ 09: ರಾಜಸ್ಥಾನದ ಚುರು ಜಿಲ್ಲೆಯ ಭಾನುಡಾ ಗ್ರಾಮದ ಬಳಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲಟ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನದ ಅವಶೇಷಗಳು ಪೈಲಟ್ ದೇಹದ ಜೊತೆಗೆ ಹೊಲವೊಂದರಲ್ಲಿ ಪತ್ತೆಯಾಗಿವೆ. ಮೃತದೇಹ ತೀವ್ರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಪೈಲಟ್ ಮತ್ತು ಇನ್ನೊಬ್ಬ ವ್ಯಕ್ತಿಯ ಗುರುತುಗಳನ್ನು ಸೇನೆ ಮತ್ತು ಸ್ಥಳೀಯ ಆಡಳಿತವು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.ಅಪಘಾತದಿಂದಾಗಿ ಹತ್ತಿರದ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಸ್ವತಃ ನಂದಿಸಲು ಪ್ರಯತ್ನಿಸಿದ್ದೇವೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 170ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

