AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್‌ಸಿ ಹಗರಣ: ಲೂಟಿ ಹಣದಲ್ಲಿ ಗೆಳತಿಗೆ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ ಕುಮಾರ್​

ಕೆಪಿಎಸ್‌ಸಿ ಹಗರಣ: ಲೂಟಿ ಹಣದಲ್ಲಿ ಗೆಳತಿಗೆ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ ಕುಮಾರ್​

ರಮೇಶ್ ಬಿ. ಜವಳಗೇರಾ
|

Updated on:Sep 18, 2026 | 3:19 PM

Share

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅಕ್ರಮ ಸಂಪತ್ತು ಮತ್ತು ಶೋಕಿ ಜೀವನದ ಒಂದೊಂದೇ ಕರಾಳ ಮುಖಗಳು ಸಿಐಡಿ ತನಿಖೆಯಲ್ಲಿ ಬಯಲಾಗುತ್ತಿವೆ. ಲೂಟಿ ಮಾಡಿದ ಹಣದಲ್ಲಿ ಗೆಳತಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕೊಡಿಸಿರುವುದು ಹಾಗೂ ಆಪ್ತರಿಂದ ವಿದೇಶ ಪ್ರವಾಸದ ಆಫರ್ ಪಡೆದುಕೊಂಡಿರುವುದು ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು, (ಸೆಪ್ಟೆಂಬರ್ 18): ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅಕ್ರಮ ಸಂಪತ್ತು ಮತ್ತು ಶೋಕಿ ಜೀವನದ ಒಂದೊಂದೇ ಕರಾಳ ಮುಖಗಳು ಸಿಐಡಿ ತನಿಖೆಯಲ್ಲಿ ಬಯಲಾಗುತ್ತಿವೆ. ಲೂಟಿ ಮಾಡಿದ ಹಣದಲ್ಲಿ ಗೆಳತಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕೊಡಿಸಿರುವುದು ಹಾಗೂ ಆಪ್ತರಿಂದ ವಿದೇಶ ಪ್ರವಾಸದ ಆಫರ್ ಪಡೆದುಕೊಂಡಿರುವುದು ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಹೌದು… ಈ ಹಿಂದೆ ಜುಲೈ ತಿಂಗಳಲ್ಲಿ ಬೆಂಗಳೂರಿನ ಪ್ರತಿಷ್ಠಿತ ಜ್ಯುವೆಲ್ಲರಿಯೊಂದರಲ್ಲಿ ಖರೀದಿಸಿದ್ದ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಸಿಐಡಿ ಅಧಿಕಾರಿಗಳು ಈಗಾಗಲೇ ಜಪ್ತಿ ಮಾಡಿದ್ದರು.. ಈಗ ಓಂ ಲಕ್ಷ್ಮಿ ಕೋ-ಆಪರೇಟಿವ್ ಸೊಸೈಟಿಯ ಅನುಮಾನಾಸ್ಪದ ಹಣ ವರ್ಗಾವಣೆ ಪರಿಶೀಲನೆ ನಡೆಸುವಾಗ, ಅದೇ ಗೆಳತಿಗೆ ಮತ್ತೆ 30 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಖರೀದಿಸಿಕೊಟ್ಟಿರುವುದು ಪತ್ತೆಯಾಗಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 18, 2026 03:17 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More