ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಎಲ್ಲಿಗೆ ಹೋಗಿದ್ದಾರೆಂದು ಮಾಹಿತಿ ಬಿಚ್ಚಿಟ್ಟ ಗೃಹ ಸಚಿವ

Updated on: Aug 22, 2026 | 7:42 PM

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಕುರಿತು ಇಡಿ ದಾಳಿ ನಡೆದ ಬೆನ್ನಲ್ಲೇ, ರಾಜ್ಯದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದ್ರೆ, ಇದೀಗ ಐಎಎಸ್ ಅಧಿಕಾರಿಯ ಸುಳಿವು ಪತ್ತೆಯಾಗಿದ್ದು, ಅಧಿಕಾರಿ ಎಲ್ಲಿಗೆ ಹೋಗಿದ್ದಾರೆ ಎನ್ನುವುದನ್ನು ಸ್ವತಃ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರು, (ಆಗಸ್ಟ್ 22): ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಕುರಿತು ಇಡಿ ದಾಳಿ ನಡೆದ ಬೆನ್ನಲ್ಲೇ, ರಾಜ್ಯದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಆದ್ರೆ, ಇದೀಗ ಐಎಎಸ್ ಅಧಿಕಾರಿಯ ಸುಳಿವು ಪತ್ತೆಯಾಗಿದ್ದು, ಅಧಿಕಾರಿ ಎಲ್ಲಿಗೆ ಹೋಗಿದ್ದಾರೆ ಎನ್ನುವುದನ್ನು ಸ್ವತಃ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,ಐಎಎಸ್ ಅಧಿಕಾರಿ ನಾಪತ್ತೆಯಾಗಿಲ್ಲ. ಅವರ ತಂದೆಗೆ ಅನಾರೋಗ್ಯ ಹಿನ್ನೆಲೆ ಊರಿಗೆ ತೆರಳಿದ್ದಾರೆ. ಅಧಿಕಾರಿ ಉತ್ತರ ಪ್ರದೇಶದ ತಮ್ಮ ಊರಿಗೆ ಹೋಗಿದ್ದು, ಮೊಬೈಲ್ ಆಫ್ ಆಗಿದ್ದಕ್ಕೆ ಮಿಸ್ ಕಮ್ಯುನಿಕೇಷನ್ ಆಗಿದೆ. ನಿನ್ನೆ (ಆಗಸ್ಟ್ 21) ಹಬ್ಬ ಇತ್ತು, ಮೇಲಧಿಕಾರಿಗಳಿಗೆ ತಿಳಿಸಿ ಹೋಗಿದ್ದಾರೆ. ಖುದ್ದು ನಾನೇ ಮಾತಾಡಿದ್ದೀನಿ, 2 ದಿನಗಳ ಬಳಿಕ ವಾಪಸ್ ಬರುತ್ತಾರೆ. ಐಟಿ, ಇಡಿ ಭಯಕ್ಕೆ ಹೋಗಿದ್ದಾರೆ ಅನ್ನುವುದೆಲ್ಲಾ ಸುಳ್ಳು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆ ಬಿದ್ದಿದೆ.

ಇದನ್ನೂ ಓದಿ: KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

Loading...
Unable to load recommendations.
Follow Us