ಹತ್ತೇ ಸೆಕೆಂಡ್ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕಾರ ಮಾಡಿದ ಐಎಎಸ್ ಅಧಿಕಾರಿ!
ಐಎಎಸ್ ಅಧಿಕಾರಿ ಟೀನಾ ದಾಬಿ ರಾಜಸ್ಥಾನದ ಬಿಜೆಪಿ ನಾಯಕನ ಮುಂದೆ 10 ಸೆಕೆಂಡ್ನಲ್ಲಿ 5 ಬಾರಿ ಬಗ್ಗಿ ನಮಸ್ಕರಿಸಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ಪ್ರಸ್ತುತ ಬಾರ್ಮರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ರಾಜಸ್ಥಾನದ ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರ ಮುಂದೆ ನಮಸ್ಕರಿಸುವ ವಿಡಿಯೋ ವೈರಲ್ ಆಗಿದೆ.
ಜೈಪುರ: ಬಿಜೆಪಿ ನಾಯಕ ಸತೀಶ್ ಪೂನಿಯಾ ಬರುತ್ತಿದ್ದಂತೆ ಅವರನ್ನು ಸ್ವಾಗತಿಸಲು ನಿಂತಿದ್ದ ಐಎಎಸ್ ಅಧಿಕಾರಿ ಟೀನಾ ದಾಬಿ 10 ಸೆಕೆಂಡ್ಗಳಲ್ಲಿ ಅವರ ಮುಂದೆ 5 ಬಾರಿ ಬಗ್ಗೆ ನಮಸ್ಕಾರ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆದರೆ, ಆಕೆಯತ್ತ ಗಮನ ಹರಿಸದ ಬಿಜೆಪಿ ನಾಯಕ ತನ್ನ ಮೊಬೈಲ್ನಲ್ಲಿ ಮುಳುಗಿ ಹೋಗಿರುವುದನ್ನು ಕಾಣಬಹುದು. ಪ್ರಸ್ತುತ ಬಾರ್ಮರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ರಾಜಸ್ಥಾನದ ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರ ಮುಂದೆ ನಮಸ್ಕರಿಸುವ ಮೂಲಕ ಗಮನ ಸೆಳೆದರು. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ