AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಲು ಮುಟ್ಟಿದ ಮಹಾಂತೇಶ್ ಬೀಳಗಿ ಕುಟುಂಬಸ್ಥರ ಆಕ್ರಂದನ

ಮುಗಿಲು ಮುಟ್ಟಿದ ಮಹಾಂತೇಶ್ ಬೀಳಗಿ ಕುಟುಂಬಸ್ಥರ ಆಕ್ರಂದನ

ಭಾವನಾ ಹೆಗಡೆ
|

Updated on: Nov 26, 2025 | 10:23 AM

Share

ಹಿರಿಯ ಐಎಎಸ್ ಅಧಿಕಾರಿ ಹಾಗೂ ಬಿಇಎಸ್‌ಸಿಒಎಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಕಲಬುರಗಿಯ ಜೇವರ್ಗಿ ಬಳಿ ನಡೆದ ಈ ದುರಂತದಲ್ಲಿ ಕರ್ತವ್ಯನಿಷ್ಠ ಅಧಿಕಾರಿಯನ್ನು ಕರ್ನಾಟಕ ಕಳೆದುಕೊಂಡಿದೆ. ಅವರ ನಿಧನಕ್ಕೆ ಕುಟುಂಬಸ್ಥರು, ಸಹೋದ್ಯೋಗಿಗಳು ಮತ್ತು ಸಾರ್ವಜನಿಕರು ಆಘಾತ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ, ನವೆಂಬರ್ 26: ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಸ್ಕಾಂ (BESCOM) ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ (Mahantesh Bilagi) ನಿನ್ನೆ ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದೀಗ ಅವರ ಮೃತದೇಹವನ್ನು ಕಲಬುರಗಿಯಿಂದ ಬೆಳಗಾವಿಯ ರಾಮದುರ್ಗಕ್ಕೆ ತಲುಪಿಸಲಾಗಿದ್ದು, ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.