ಹೆಚ್​ಡಿಡಿ-ಹೆಚ್​ಡಿಕೆ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಇಬ್ರಾಹಿಂ

ಹೆಚ್​ಡಿಡಿ-ಹೆಚ್​ಡಿಕೆ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಇಬ್ರಾಹಿಂ

Anil Kalkere
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 18, 2024 | 4:18 PM

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರವಾಗಿ ಮಾತನಾಡಿದ ಸಿ.ಎಂ.ಇಬ್ರಾಹಿಂ (C. M. Ibrahim), ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ, ಮಗ ಏಕೆ ಕುಳಿತಿದ್ದರು?. ಸುಪ್ರೀಂಕೋರ್ಟ್‌ಗೆ ಹೋಗಿ ಎಂದು ಕುಮಾರಸ್ವಾಮಿ ಹೇಳುತ್ತಾರೆ. ರಾಜ್ಯಪಾಲರು ಟಿ.ಜೆ.ಅಬ್ರಹಾಂಗೂ ಇದೇ ರೀತಿ ಹೇಳಬೇಕಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರದ್ದು ನಿತ್ಯ ತೆಗೆದು ಇಡುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು, ಆ.18: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರವಾಗಿ ಮಾತನಾಡಿದ ಸಿ.ಎಂ.ಇಬ್ರಾಹಿಂ (C. M. Ibrahim), ‘ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನೂ ಪ್ರತಿಭಟನೆ ಮಾಡುತ್ತೇನೆ. ಸುಪ್ರೀಂಕೋರ್ಟ್​ಗೆ ಹೋಗಲು ಹೆಚ್​ಡಿಕೆ ಹೇಳ್ತಾರೆ, ‘ರಾಜ್ಯಪಾಲರು ಇವರ ಮನೆ ಕ್ಲರ್ಕಾ. ಅಮಿತ್ ಶಾ ಮನೆ ಮುಂದೆ ಹೋಗಿ ಅಪ್ಪ, ಮಗ ಏಕೆ ಕುಳಿತಿದ್ದರು?. ಸುಪ್ರೀಂಕೋರ್ಟ್‌ಗೆ ಹೋಗಿ ಎಂದು ಕುಮಾರಸ್ವಾಮಿ ಹೇಳುತ್ತಾರೆ. ರಾಜ್ಯಪಾಲರು ಟಿ.ಜೆ.ಅಬ್ರಹಾಂಗೂ ಇದೇ ರೀತಿ ಹೇಳಬೇಕಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಅವರದ್ದು ನಿತ್ಯ ತೆಗೆದು ಇಡುತ್ತೇನೆ. ನಾನು ಹಳೇ ಭೂ ಕೈಲಾಸ ನಾಟಕ ಬರೆದವನು, ಎಲ್ಲಾ ಗೊತ್ತಿದೆ.  ಬಸ್ ಸ್ಟ್ಯಾಂಡ್ ಬಸವಿಯರು ಪತಿವ್ರತೆ ಪಾಠ ಹೇಳುವಂಗೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ