AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?

ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?

ಪೃಥ್ವಿಶಂಕರ
|

Updated on: Jan 24, 2026 | 7:23 PM

Share

T20 World Cup 2026:2026ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆ ಅನಿಶ್ಚಿತವಾಗಿದೆ. ಬಾಂಗ್ಲಾದೇಶವನ್ನು ಹೊರಗಿಟ್ಟ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಪಾಕ್ ತಂಡದ ಭವಿಷ್ಯದ ನಿರ್ಧಾರವನ್ನು ಸರ್ಕಾರಕ್ಕೆ ಬಿಟ್ಟಿದ್ದಾರೆ ಎಂದಿದ್ದಾರೆ. ಬಾಂಗ್ಲಾದೇಶಕ್ಕೆ ಅನ್ಯಾಯವಾಗಿದೆ ಎಂದು ನಖ್ವಿ ಹೇಳಿದ್ದು, ಪಾಕಿಸ್ತಾನ ಸರ್ಕಾರ ನಿರ್ಧರಿಸಿದರೆ, ಪಾಕ್ ತಂಡವೂ ಪಂದ್ಯಾವಳಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

2026 ರ ಐಸಿಸಿ ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನ ತಂಡ ಭಾಗವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಬಾಂಗ್ಲಾದೇಶ ಈಗಾಗಲೇ ಪಂದ್ಯಾವಳಿಯಿಂದ ಹೊರಬಿದ್ದಿದ್ದು, ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಮ್ಮ ತಂಡದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪಂದ್ಯಾವಳಿಯಲ್ಲಿ ಭಾಗವಹಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

ಪಾಕಿಸ್ತಾನ ತಂಡವು ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಸ್ಪಷ್ಟಪಡಿಸಿದ್ದಾರೆ. ಬಾಂಗ್ಲಾದೇಶವನ್ನು ಪಂದ್ಯಾವಳಿಯಿಂದ ಹೊರಗಿಟ್ಟ ನಂತರ ಪಾಕ್ ಮಂಡಳಿ ಅಧ್ಯಕ್ಷನಿಂದ ಈ ಹೇಳಿಕೆ ಬಂದಿದೆ. ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಪಂದ್ಯಗಳನ್ನು ಆಡದಿರಲು ನಿರ್ಧರಿಸಿತ್ತು. ಬಿಸಿಬಿ ತನ್ನ ಪಂದ್ಯಗಳನ್ನು ಭಾರತದ ಹೊರಗೆ ಸ್ಥಳಾಂತರಿಸುವಂತೆ ಐಸಿಸಿಯನ್ನು ವಿನಂತಿಸಿತು, ಆದರೆ ಜನವರಿ 21 ರಂದು ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ಪ್ರಸ್ತಾಪವನ್ನು ತಿರಸ್ಕರಿಸಲಾಯಿತು. ಇದರ ನಂತರ, ಐಸಿಸಿ ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಆಡುವ ಅವಕಾಶ ನೀಡಿದೆ.

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಭಾಗವಹಿಸುವಿಕೆಯ ಬಗ್ಗೆ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ತೆಗೆದುಕೊಳ್ಳುತ್ತದೆ. ಪ್ರಧಾನಿ ದೇಶಕ್ಕೆ ಮರಳಲು ನಾವು ಕಾಯುತ್ತಿದ್ದೇವೆ. ಬಾಂಗ್ಲಾದೇಶಕ್ಕೆ ಅನ್ಯಾಯ ಮಾಡಲಾಗಿದೆ. ಪಾಕಿಸ್ತಾನ ಸರ್ಕಾರ ಪಂದ್ಯಾವಳಿಯನ್ನು ಬಹಿಷ್ಕರಿಸುವಂತೆ ಕೇಳಿದರೆ, ಐಸಿಸಿ 22 ನೇ ತಂಡವನ್ನು ಸೇರಿಸಿಕೊಳ್ಳಬಹುದು. ಅದು ನಮಗೆ ಮುಖ್ಯವಲ್ಲ. ಬಾಂಗ್ಲಾದೇಶವನ್ನು ಅನ್ಯಾಯಕ್ಕೆ ಬಲಿಪಶುವನ್ನಾಗಿ ಮಾಡಬಾರದು. ಅವರು ಕೂಡ ಪ್ರಮುಖ ಸದಸ್ಯರಾಗಿದ್ದಾರೆ ಎಂದು ಮೊಹ್ಸಿನ್ ನಖ್ವಿ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ