ICC World Cup: ವಿಶ್ವಕಪ್ ಪ್ರೊಮೊ ಶೂಟ್ನಲ್ಲಿ ಮಿಂಚಿದ ಟೀಮ್ ಇಂಡಿಯಾ ಆಟಗಾರರು
Team India World Cup Promo Shoot: ಐಸಿಸಿ ಏಕದಿನ ವಿಶ್ವಕಪ್ 2023ರ ಪ್ರೊಮೊ ಶೂಟ್ನಲ್ಲಿ ಟೀಮ್ ಇಂಡಿಯಾ ಆಟಗಾರರು ಐಸಿಸಿ ಏಕದಿನ ವಿಶ್ವಕಪ್ 2023ರ ಪ್ರೊಮೊ ಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವಿ ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಆಟಗಾರರು ಹಾಜರಿದ್ದರು.
ಐಸಿಸಿ ಏಕದಿನ ವಿಶ್ವಕಪ್ 2023ರ (ICC ODI World Cup 2023) ಪ್ರೊಮೊ ಶೂಟ್ನಲ್ಲಿ ಟೀಮ್ ಇಂಡಿಯಾ ಆಟಗಾರರು ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಹುತೇಕ ತಂಡಗಳ ಫೋಟೋ ಶೂಟ್ ಮುಗಿದಿದ್ದು, ಇದೀಗ ಟೂರ್ನಿಯ ಪ್ರೊಮೊ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಈ ವಿಡಿಯೋದಲ್ಲಿ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವಿ ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಆಟಗಾರರು ಕಾಣಿಸಿಕೊಂಡಿದ್ದಾರೆ. ಈ ಚಿತ್ರೀಕರಣದ ವಿಡಿಯೋವನ್ನು ಭಾರತ ಕ್ರಿಕೆಟ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ಶೂಟ್ನಲ್ಲಾಗಲಿ, ಪ್ರೊಮೊ ವಿಡಿಯೋ ಶೂಟ್ನಲ್ಲಾಗಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿಲ್ಲ. ಕೊಹ್ಲಿ ವೈಯುಕ್ತಿಕ ಕಾರಣಗಳಿಗಾಗಿ ತಿರುವನಂತಪುರದಿಂದ ಮುಂಬೈಗೆ ಮರಳಿದ್ದಾರೆ. ಹೀಗಾಗಿ ಅವರು ಚಿತ್ರೀಕರಣದಲ್ಲಿ ಭಾಗವಹಿಸಿರಲಿಲ್ಲ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ