ಅಬ್ದುಲ್ ಕಲಾಂ ದೇಶದ ರಾಷ್ಟ್ರಪತಿ ಆಗಬಹುದಾದರೆ ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ತಪ್ಪಲ್ಲ: ರಾಮಲಿಂಗಾರೆಡ್ಡಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾತು ಬಂದಾಗ ಸಚಿವ ರಾಮಲಿಂಗಾರೆಡ್ಡಿ, ಸ್ವಾಂತಂತ್ರ್ಯಕ್ಕಾಗಿ ನಡೆದ ಚಳುವಳಿಯಲ್ಲಿ ಆರೆಸ್ಸೆಸ್ ಪಾತ್ರವೇನೂ ಇಲ್ಲ, ಅದರ ನಾಯಕಱರೂ ಹೋರಾಟದಲ್ಲಿ ಭಾಗಿಯಾಗಲಿಲ್ಲ, ಇದನ್ನು ಹಿಂದೆಯೂ ಹೇಳಿದ್ದೇನೆ ಮತ್ತು ಈಗಲೂ ಹೇಳುತ್ತೇನೆ, ನಾಗ್ಪುರದಲ್ಲಿರುವ ಆರೆಸ್ಸೆಸ್ ಕಚೇರಿಯ ಮೇಲೆ ಅವರು 57 ವರ್ಷಗಳ ತನಕ ತಿರಂಗವನ್ನು ಹಾರಿಸಿರಲಿಲ್ಲ ಎಂದು ಹೇಳಿದರು.
ಬೆಂಗಳೂರು, ಆಗಸ್ಟ್ 25: ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಂದ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟಿಸುತ್ತಿರುವುದು ತೀವ್ರ ಚರ್ಚೆಗೆ ಗುರಿಯಾಗಿದೆ. ಮಾಧ್ಯಮಗಳೊಂದಿಗೆ ಮಾತಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy), ಎಪಿಜೆ ಅಬ್ದುಲ್ ಕಲಾಂ ಅವರು ಭಾರತದ ರಾಷ್ಟ್ರಪತಿಗಳಾಗಿದ್ದರು, ಅವರು ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಬಹುದಾದರೆ ಬಾನು ಮುಷ್ತಾಕ್ ಅವರು ದಸರಾ ಮಹೋತ್ಸವ ಉದ್ಘಾಟಿಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಬಾನು ಮುಷ್ತಾಕ್ ಅವರು ಇದೇ ಮಣ್ಣಿನಲ್ಲಿ ಹುಟ್ಟಿ ಕನ್ನಡ ಸಾಹಿತ್ಯದಲ್ಲಿ ತೊಡಗಿಸಿಕೊಂಡವರು, ಜಾತ್ಯಾತೀತ ಮನೋಭಾವದವರು, ತಮ್ಮ ಧರ್ಮದ ಜೊತೆ ಬೇರೆ ಧರ್ಮಗಳನ್ನು ಸಮಾನವಾಗಿ ಕಾಣುವವರು, ಹಾಗಾಗಿ ಅವರಿಂದ ದಸರಾ ಉದ್ಘಾಟನೆ ಮಾಡಿಸುವುದು ಸೂಕ್ತವಾಗಿದೆ ಎಂದು ಸಚಿವ ಹೇಳಿದರು.
ಇದನ್ನೂ ಓದಿ: ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

