ಎಐಸಿಸಿ ಅಧಿವೇಶನಕ್ಕೆ ಅಡ್ಡಿಪಡಿಸುವ ಪ್ರಯತ್ನ ಬಿಜೆಪಿ ಮಾಡಿದರೆ ಕಾನೂನುರೀತ್ಯಾ ಕ್ರಮ: ಸಿದ್ದರಾಮಯ್ಯ

|

Updated on: Dec 18, 2024 | 6:03 PM

ವಿಧಾನಮಂಡಲದ ಕಾರ್ಯಕಲಾಪಗಳಿಗೆ ಉದ್ದೇಶಪೂರ್ವಕವಾಗಿ ಭಂಗತರುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ, ವಿರೋಧ ಪಕ್ಷದ ಸದಸ್ಯರು ಬಿಜೆಪಿಯವರಾಗಿರಲಿ ಅಥವಾ ಕಾಂಗ್ರೆಸ್ ಪಕ್ಷದವರೇ ಅಗಿರಲಿ ಸದನದಲ್ಲಿ ಗೌರವಯುತವಾಗಿ ನಡೆದುಕೊಳ್ಳಬೇಕು, ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತಾಡಬೇಕು ಮತ್ತು ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ: ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ರಸ್ತೆಗಳ ದುರಸ್ತಿಗೆ ಸಂಬಂಧಿಸಿದಂತೆ ಗೋಪಾಲಯ್ಯ ಮತ್ತು ಇತರ ಬಿಜೆಪಿ ಶಾಸಕರು ತಮ್ಮನ್ನು ಭೇಟಿಯಾಗಿದ್ದರು ಎಂದು ಹೇಳಿದರು. ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸುವ ದಿನದಂದೇ ಬಿಜೆಪಿ ವಕ್ಫ್ ವಿರುದ್ಧ ಹೋರಾಟ ಹಮ್ಮಿಕೊಂಡಿರುವ ವಿಚಾರವನ್ನು ಅವರಿಗೆ ಹೇಳಿದಾಗ, ಬಿಜೆಪಿ ನಾಯಕರು ಸಂವಿಧಾನ ವಿರೋಧಿಗಳು, ಗಾಂಧೀಜಿ ಬಗ್ಗೆ ಅವರಲ್ಲಿ ಅಭಿಮಾನವಿಲ್ಲ, ಅವರು ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸದೆ ಹೋಗಿದ್ದರೆ ಇವರು ಪ್ರತಿಭಟನೆ ನಡೆಸಲು ಆಗುತಿತ್ತೇ? ಸಂವಿಧಾನದ ರಚನೆಯಾಗುತ್ತಿತ್ತೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಆದರೆ ಬಿಜೆಪಿಯವರು ಅಧಿವೇಶನಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡಿದರೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮುಡಾ ಸೇರಿದಂತೆ ಎಲ್ಲ ಹಗರಣಗಳನ್ನು ಸಿಎಂ ಸಿದ್ದರಾಮಯ್ಯನವರೇ ಸಿಬಿಐ ತನಿಖೆಗೆ ಒಪ್ಪಿಸಲಿ: ಬಿವೈ ವಿಜಯೇಂದ್ರ