Bagalkot: ಸದನದಲ್ಲಿ ನಾನು ಹೇಳಿದ್ದು ಸುಳ್ಳು ಅಂತ ಸಿಎಂ ಬಸವರಾಜ ಬೊಮ್ಮಾಯಿ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತನಾಗುತ್ತೇನೆ: ಸಿದ್ದರಾಮಯ್ಯ
ಒಂದು ಪಕ್ಷ ಬೊಮ್ಮಾಯಿ ನಾನು ಹೇಳಿದ್ದು ಸುಳ್ಳು ಅಂತ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ, ಇಲ್ಲದಿದ್ದರೆ ಅವರು ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಅಂತ ಹೇಳಿದರು.
ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಕಳೆದ ರಾತ್ರಿ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯ ಭಾಗವಾಗಿ ಆಯೋಜಿಸಲಾಗಿದ್ದ ಸಮಾವೇಶವೊಂದರಲ್ಲಿ ಅಬ್ಬರದ ಭಾಷಣ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕಳೆದ ಬಾರಿಯ ಚುನಾವಣೆ ಸಮಯದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು ಆದರೆ ಅವುಗಳಲ್ಲಿ ಈಡೇರಿಸಿದ್ದು ಕೇವಲ 50 ಮಾತ್ರ. ಇದೇ ವಿಷಯವನ್ನು ತಾವು ಸದನದಲ್ಲಿ ಪ್ರಸ್ತಾಪ ಮಾಡಿದಾಗ ಸುಳ್ಳು ಹೇಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು ಎಂದ ಸಿದ್ದರಾಮಯ್ಯ ಒಂದು ಪಕ್ಷ ಬೊಮ್ಮಾಯಿ ನಾನು ಹೇಳಿದ್ದು ಸುಳ್ಳು ಅಂತ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ (bid farewell) ಘೋಷಿಸುತ್ತೇನೆ, ಇಲ್ಲದಿದ್ದರೆ ಅವರು ರಾಜಕೀಯ ಸನ್ಯಾಸ ತೆಗೆದುಕೊಳ್ಳಬೇಕು ಅಂತ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos