Loading video

ಸಿಎಂ ಬದಲಾವಣೆ ಆಗುವುದಾದರೆ ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ

Updated on: Jul 04, 2025 | 12:59 PM

ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಅವರು ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಹೈಕಮಾಂಡ್‌ನ ನಿರ್ಧಾರಕ್ಕೆ ತಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಅಲ್ಲದೆ, ಗೃಹಲಕ್ಷ್ಮಿ ಯೋಜನೆಯಡಿ ಹಣ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ.

ಬೀದರ್, ಜುಲೈ 4: ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬಂದು ಪಕ್ಷದ ಶಾಸಕರ ಬಳಿ ಖುದ್ದಾಗಿ ಒನ್ ಟು ಒನ್ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾಗಿದೆ. ಈ ಬೆಳವಣಿಗೆಯ ನಂತರ ನಾನೇ ಐದು ವರ್ಷ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರನ್ನು ಬೆಂಬಲಿಸುವುದು ಬಿಟ್ಟು ಬೇರೆ ಮಾರ್ಗವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ. ಇದೀಗ, ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆಯಾಗುವುದಾದರೆ ನಿಮ್ಮ ಬೆಂಬಲ ಸಿದ್ದರಾಮಯ್ಯಗೋ ಅಥವಾ ಡಿಕೆ ಶಿವಕುಮಾರ್​​ಗೋ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ. ಇದಕ್ಕೆ ಅವರ ಉತ್ತರ ಏನಿತ್ತು ಎಂಬುದನ್ನು ವಿಡಿಯೋದಲ್ಲಿ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ