Tender Issue | ಕಾಂಗ್ರೆಸ್ ನಾಯಕರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ದೂರು ಸಲ್ಲಿಸಲಿ: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 15, 2023 | 1:52 PM

ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದರು.

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಮತ್ತೊಂದು ಆರೋಪ ತಲೆಯೆತ್ತಿದೆ. ಸರ್ಕಾರ ಧಾವಂತದಲ್ಲಿ ಟೆಂಡರ್ ಗಳನ್ನು ಕರೆದು ಅಲಾಟ್ ಮಾಡಿದೆ ಎಂದು ಬಿಜೆಪಿ ಶಾಸಕರೇ ಆಗಿರುವ ಗೂಳಿಹಟ್ಟಿ ಶೇಖರ್ (Goolihatti Shekhar) ದಾಖಲೆ ಸಮೇತ ಅರೋಪ ಮಾಡಿರುವುದನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ (Congress) ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನ ಸೌಧದ ಬಳಿ ಮಾಧ್ಯಮಗಳೊಡನೆ ಮಾತಾಡಿದ ಬಿಜೆಪಿ ಶಾಸಕ ಸಿಟಿ ರವಿ (CT Ravi), ಕಾಂಗ್ರೆಸ್ ಆಧಾರವಿಲ್ಲದೆ ಆರೋಪ ಮಾಡುವುದನ್ನು ಕರಗತ ಮಾಡಿಕೊಂಡಿದೆ ಎಂದರು. ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 15, 2023 01:52 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.