AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಪ್ಪಾಗಿದ್ರೆ ಶಿಕ್ಷೆ ಆಗಲಿ’; ದರ್ಶನ್ ಪ್ರಕರಣದ ಬಗ್ಗೆ ಧನಂಜಯ್ ಮಾತು

‘ತಪ್ಪಾಗಿದ್ರೆ ಶಿಕ್ಷೆ ಆಗಲಿ’; ದರ್ಶನ್ ಪ್ರಕರಣದ ಬಗ್ಗೆ ಧನಂಜಯ್ ಮಾತು

ರಾಜೇಶ್ ದುಗ್ಗುಮನೆ
|

Updated on: Jul 11, 2024 | 8:30 AM

Share

ನಟ ಡಾಲಿ ಧನಂಜಯ್​ ಕೂಡ ದರ್ಶನ್​​ ಪ್ರಕರಣದ ಬಗ್ಗೆ ಮಾತನಾಡಲು ಸಿದ್ಧರಿರಲಿಲ್ಲ. ಹಾಗಾಗಿ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅವರನ್ನು ಟ್ರೋಲ್​ ಮಾಡಿದ್ದರು. ಈಗ ಧನಂಜಯ್ ಅವರು ಪ್ರಕರಣದ ಬಗ್ಗೆ ಮಾತನಾಡಿದ್ದರು. ಇಷ್ಟು ದಿನ ಮೌನವಾಗಿದ್ದು ಏಕೆ ಎಂಬುದನ್ನು ವಿವರಿಸಿದ್ದಾರೆ ಅವರು.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಈ ರೀತಿಯ ಕೃತ್ಯ ಮಾಡಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಈ ಮೊದಲು ‘ಕೋಟಿ’ ಸಿನಿಮಾ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಡಾಲಿ ಧನಂಜಯ್ ಅವರಿಗೆ ಕೇಳಿದಾಗ ‘ಸಿನಿಮಾ ಬಗ್ಗೆ ಮಾತನಾಡೋಣ’ ಎಂದಿದ್ದರು. ಈಗ ಅವರಿಗೆ ಮತ್ತೆ ಇದೇ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ. ನಡೆದ ಕೃತ್ಯನ್ನು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಬದುಕು ಅವಕಾಶಗಳನ್ನು ಕೊಟ್ಟೇ ಕೊಡುತ್ತದೆ. ಮತ್ತೆ ಬಂದು ದರ್ಶನ್ ಪ್ರೇಕ್ಷಕರನ್ನು ಮನರಂಜಿಸಲಿ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More