AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರೀ ಜಮೀನು ಒತ್ತುವರಿ ಆಗಿದ್ದರೆ ತೆರವು ಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ: ಎ ಮಂಜು, ಶಾಸಕ

ಸರ್ಕಾರೀ ಜಮೀನು ಒತ್ತುವರಿ ಆಗಿದ್ದರೆ ತೆರವು ಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ: ಎ ಮಂಜು, ಶಾಸಕ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 19, 2025 | 3:09 PM

Share

ಕುಮಾರಸ್ವಾಮಿಯವರು ಬಿಡದಿಯ ಕೇತಗಾನಹಳ್ಳಿಯಲ್ಲಿ ಜಮೀನನ್ನು ಒತ್ತುವರಿ ಮಾಡಿಕೊಂಡಿಲ್ಲ ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ಜಮೀನಲ್ಲಿ ಸಾಗುವಳಿ ಮಾಡುತ್ತಿಲ್ಲ ಅಂತಾದರೆ ಭಯ ಯಾಕೆ ಎಂದು ಡಿಕೆ ಶಿವಕುಮಾರ್ ಕೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಎ ಮಂಜು ಯಾರು ಭಯಪಟ್ಟಿದ್ದಾರೆ, ಏನಾದರೂ ತಪ್ಪು ಮಾಡಿದ್ದರೆ ತಾನೇ ಭಯಪಡೋದು ಎಂದು ಹೇಳಿದರು.

ಬೆಂಗಳೂರು, 19 ಮಾರ್ಚ್: ಸರ್ಕಾರೀ ಜಮೀನು ಒತ್ತುವರಿಯಾಗಿದ್ದರೆ ಅದನ್ನು ತೆರವುಮಾಡಿಸಲು ಕೋರ್ಟ್ ಆದೇಶ ಬೇಕಿಲ್ಲ, ಸರ್ಕಾರವೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಡಿಸುತ್ತದೆ ಎಂದು ಜೆಡಿಎಸ್ ಶಾಸಕ ಎ ಮಂಜು ಹೇಳಿದರು. ಸಿದ್ದರಾಮಯ್ಯ ಸರ್ಕಾರ ಕೇವಲ ಹೆಚ್​ ಡಿ ಕುಮಾರಸ್ವಾಮಿಯವರು ಖರೀದಿಸಿದ ಜಮೀನನ್ನು ತನಿಖೆ ನಡೆಸಲು ಎಸ್​ಐಟಿಯನ್ನು ರಚಿಸದ್ದು ರಾಜಕೀಯ ದ್ವೇಷ ಸಾಧಿಸುತ್ತಿರುವ ಸಂಗತಿ ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಮಂಜು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೇತಗಾನಹಳ್ಳಿ ಭೂ ಒತ್ತುವರಿ ತೆರವು ಕಾರ್ಯಾಚರಣೆ: ಹೆಚ್​ಡಿ ಕುಮಾರಸ್ವಾಮಿ ಮುಂದಿನ ಪ್ಲಾನ್ ಹೀಗಿದೆಯಂತೆ!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.