AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು: ಯತ್ನಾಳ್​

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು: ಯತ್ನಾಳ್​

ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on: Aug 10, 2025 | 9:31 PM

Share

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಗವಿಷಿದ್ದಪ್ಪ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ನೀಡುವ ಭರವಸೆ ನೀಡಿದ್ದಾರೆ. ಈ ಕೊಲೆಯಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಯತ್ನಾಳ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿದ್ದಾರೆ. ಪ್ರಕರಣದ ತನಿಖೆ ಮತ್ತು ರಾಜಕೀಯ ಪರಿಣಾಮಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕೊಪ್ಪಳ, ಆಗಸ್ಟ್​ 10: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕ ಗವಿಸಿದ್ದಪ್ಪ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡಲಾಗುವುದು. ಈ ರೀತಿಯ ಅಭಿಯಾನ ಆರಂಭಿಸುತ್ತೇವೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರಿಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಲವ್ ಜಿಹಾದ್ ಮಾಡಿದಾಗ ಮುಸ್ಲಿಮರಿಗೆ ರಕ್ಷಣೆ ನೀಡಲಾಗುತ್ತೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಸದನದಲ್ಲಿ ಪ್ರಸ್ತಾಪಿಸುವೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ವಾಗ್ದಾಳಿ ಮಾಡಿದರು.