AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಸಿಎಂ ಡಿಕೆ ಶಿವಕುಮಾರ್​​

‘ನಾನು ತಪ್ಪು ಮಾಡಿದ್ದರೆ ಪೊರಕೆಯಿಂದ ನನಗೆ ಹೊಡೆಯಿರಿ’: ಸಿಎಂ ಡಿಕೆ ಶಿವಕುಮಾರ್​​

ಹರೀಶ್ ಜಿ.ಆರ್​.
| Edited By: |

Updated on: Jul 15, 2026 | 3:43 PM

Share

ಮುಖ್ಯಾಂಶಗಳು

  • ಬಲವಂತವಾಗಿ ಜಮೀನು ತೆಹೆದುಕೊಳ್ಳುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ
  • ರೈತರು ಸ್ವಯಂ ಇಚ್ಛೆಯಿಂದ ಜಮೀನು ಕೊಟ್ಟರೆ ತೆಗೆದುಕೊಳ್ಳುತ್ತೇವೆ
  • ನನಗೆ ಹೊಡೆಯಿರಿ ಎಂದ ಸಿಎಂ ಡಿ.ಕೆ.ಶಿವಕುಮಾರ್​

ಬಿಡದಿ ಟೌನ್‌ಶಿಪ್ ಯೋಜನೆಯು ಹಿಂದಿನ ಸರ್ಕಾರಗಳಿಂದ ಮುಂದುವರಿದ ಪ್ರಕ್ರಿಯೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿಯ ಘಟನೆ ರಾಜಕೀಯ ಪ್ರೇರಿತ ಎಂದಿರುವ ಅವರು, ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರ ಅವಧಿಯ ಮಾರ್ಗದರ್ಶನವನ್ನೂ ಉಲ್ಲೇಖಿಸಿದ್ದಾರೆ.

ಬೆಂಗಳೂರು, ಜುಲೈ 15: ‘‘ತಾಯಂದಿರು ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯುವ ಅವಶ್ಯಕತೆ ಇಲ್ಲ, ಬೇಕಾದರೆ ನನಗೆ ಹೊಡೆಯಿರಿ’’ ಎಂದು ಸಿಎಂ ಡಿ.ಕೆ.ಶಿವಕುಮಾರ್​​ ಹೇಳಿದ್ದಾರೆ. ಬಿಡದಿ ಟೌನ್​ಶಿಪ್ (Bidadi Township)​ ಕುರಿತ ಸರ್ವೆಗೆ ಹೋಗಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಬಿಡದಿಯಲ್ಲಿ ನಡೆದ ಘಟನೆಯಿಂದ ಮನಸ್ಸಿಗೆ ನೋವಾಗಿದೆ. ಪೊರಕೆಯಿಂದ ಅಧಿಕಾರಿಗಳಿಗೆ ಹೊಡೆಯುವ ಅವಶ್ಯಕತೆ ಇಲ್ಲ. ಬೇಕಾದರೆ ನನಗೆ ಹೊಡೆಯಲಿ, ನಾನು ಹೊಡಿಸಿಕೊಳ್ಳುವುದಕ್ಕೆ ರೆಡಿ ಇದ್ದೇನೆ. ಬಲವಂತವಾಗಿ ಜಮೀನು ತೆಹೆದುಕೊಳ್ಳುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ’’ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More