Karnataka Assembly Polls; ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಬರಲಿಚ್ಛಿಸಿದರೆ ಅವರಿಗೆ ಸ್ವಾಗತ: ಸಿದ್ದರಾಮಯ್ಯ

|

Updated on: Apr 15, 2023 | 2:29 PM

ಅವರು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಮಾಡಿದ ಬಳಿಕವೇ ತಾನು ಪ್ರತಿಕ್ರಿಯಿಸುವುದು ಸಾಧ್ಯವಾಗುತ್ತದೆ, ಅವರು ಬರುವುದಾದರೆ ಸ್ವಾಗತ ಎಂದು ಸಿದ್ದರಾಮಯ್ಯ ಹೇಳಿದರು.

ಹಳಿಯಾಳ (ಉತ್ತರ ಕನ್ನಡ): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹಳಿಯಾಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಟಿಕೆಟ್ ಸಿಗದ ಅಸಮಾಧಾನದ ಬೇಗುದಿಯಲ್ಲಿ ಬೇಯುತ್ತಿರುವ ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ ಸೇರಬಯಸಿದರೆ ಅವರನ್ನು ಸ್ವಾಗತಿಸುವುದಾಗಿ ಹೇಳಿದರು. ಆದರೆ ಅವರು ಕಾಂಗ್ರೆಸ್ (Congress) ಸೇರುವ ಬಗ್ಗೆ ತಮ್ಮೊಂದಿಗೆ ಮಾತಾಡಿಲ್ಲ, ಅಂತ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಶೆಟ್ಟರ್ ಅವರೊಬ್ಬ ಉತ್ತಮ ನಾಯಕ ಅನ್ನೋದರಲ್ಲಿ ಎರಡು ಮಾತಿಲ್ಲ, ಅವರು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಮಾಡಿದ ಬಳಿಕವೇ ತಾನು ಪ್ರತಿಕ್ರಿಯಿಸುವುದು ಸಾಧ್ಯವಾಗುತ್ತದೆ, ಅವರು ಬರುವುದಾದರೆ ಸ್ವಾಗತ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ