ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ಒದಗಿಸದಿದ್ದರೆ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ವಿ ಮುನಿರತ್ನ, ಸಚಿವರು
ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎನ್ನುವ ಉದ್ದೇಶದಿಂದ ಸುಖಾಸುಮ್ಮನೆ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುನಿರತ್ನ ಹೇಳಿದರು.
Bengaluru: ಆರೋಪ ಮಾಡೋದು ದೊಡ್ಡ ಸಂಗತಿಯಲ್ಲ ಆದರೆ ಅದನ್ನು ಪ್ರೂವ್ ಮಾಡಬೇಕಾಗುತ್ತದೆ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು (Kempanna) ತಾವು ಮಾಡಿರುವ ಅರೋಪಗಳಿಗೆ ಪುರಾವೆ ಒದಗಿಸದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸಚಿವ ವಿ ಮುನಿರತ್ನ (V Munirathna) ಟಿವಿ9 ಕನ್ನಡ ವಾಹಿನಿಯೊಂದಿಗೆ ಮಾತಾಡುತ್ತಾ ಹೇಳಿದರು. ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು ಎನ್ನುವ ಉದ್ದೇಶದಿಂದ ಸುಖಾಸುಮ್ಮನೆ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುನಿರತ್ನ ಹೇಳಿದರು.