Karnataka Assembly Polls; ಚಿತ್ರನಟ ಸುದೀಪ್ ಬಿಜೆಪಿ ಸೇರಿದರೆ ಆ ಪಕ್ಷಕ್ಕೆ ಲಾಭವಿಲ್ಲ, ಕಾಂಗ್ರೆಸ್​ಗೆ ನಷ್ಟವೂ ಇಲ್ಲ: ರಾಮಲಿಂಗಾರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 05, 2023 | 2:14 PM

ಸಿನಿಮಾ ನಟರು ರಾಜಕೀಯ ಪ್ರವೇಶಿಸುವುದು ಮತದಾರರ ಮೇಲೆ ಪ್ರಭಾವ ಬೀರಲ್ಲ, ಎರಡೂ ಕ್ಷೇತ್ರಗಳು ಭಿನ್ನ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಕಲಬುರಗಿ: ಸಿನಿಮಾ ನಟ ಕಿಚ್ಚ ಸುದೀಪ್ (Kiccha Sudeep) ಬಿಜೆಪಿ ಸೇರಿದರೆ ಆ ಪಕ್ಷಕ್ಕೆ ಲಾಭವೂ ಇಲ್ಲ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನಷ್ಟವೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದರು. ಕಲಬುರಗಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಚಿವರು, ಸಿನಿಮಾ ನಟರು ರಾಜಕೀಯ ಪ್ರವೇಶಿಸುವುದು ಮತದಾರರ ಮೇಲೆ ಪ್ರಭಾವ ಬೀರಲ್ಲ, ಎರಡೂ ಕ್ಷೇತ್ರಗಳು ಭಿನ್ನ ಎಂದರು. ಡಿಕೆ ಶಿವಕುಮಾರ (DK Shivakumar) ಜೊತೆ ಸುದೀಪ್ ಕೆಮೆರಾಗಳಿಗೆ ಪೋಸ್ ನೀಡಿದ್ದು ಮತ್ತು ಚಿತ್ರನಟ ಕಾಂಗ್ರೆಸ್ ಸೇರುವ ಬಗ್ಗೆ ಎದ್ದ ಉಹಾಪೋಹಗಳನ್ನು ರೆಡ್ಡಿಯವರ ಮುಂದೆ ಪ್ರಸ್ತಾಪಿಸಿದಾಗ, ಅದು ಅವರ ವೈಯಕ್ತಿಕ ವಿಚಾರ; ಸುದೀಪ್, ಶಿವಕುಮಾರ್ ರನ್ನು ಭೇಟಿಯಾದಾಗ ತಾವು ಸಹ ಅಲ್ಲಿದ್ದುದ್ದಾಗಿ ಹೇಳಿದ ಅವರು ಪಕ್ಷ ಸೇರುವ ಕುರಿತು ಚರ್ಚೆಯೇನೂ ನಡೆಯಲಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.