DKS Vs HDK; ವರ್ಗಾವಣೆ ದಂಧೆ ನಡೆಯುತ್ತಿದೆ ಅಂತ ಕುಮಾರಸ್ವಾಮಿಯವರಲ್ಲಿ ಮಾಹಿತಿ ಇದ್ದರೆ ದಯವಿಟ್ಟು ನೀಡಲಿ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 30, 2023 | 4:21 PM

ತಮ್ಮ ಇಲಾಖೆಯಲ್ಲಿ ತಾವು ಇದುವರೆಗೆ ಒಂದೇ ಒಂದು ಟ್ರಾನ್ಸ್​ಫರ್ ಮಾಡಿಲ್ಲ ಎಂದು ಶಿವಕುಮಾರ್ ಹೇಳಿದರು

ದೆಹಲಿ: ರಾಷ್ಟ್ರದ ರಾಜಧಾನಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವರ್ಗಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಆರೋಪವನ್ನು ತಳ್ಳಿ ಹಾಕಿದರು. ಮುಖ್ಯಮಂತ್ರಿಗಳ ಕಚೇರಿಯಲ್ಲಿ ವರ್ಗಾವಣೆ ದಂಧೆ (transfer deals) ನಡೆಯುತ್ತಿದೆ, ಒಂದೇ ಹುದ್ದೆಗೆ ನಾಲ್ಕು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್, ಕೆಲವು ಸಲ ಕೆಲಸದ ಒತ್ತಡದಲ್ಲಿ ಅಥವಾ ಕಣ್ತಪ್ಪಿನಿಂದ ಹಾಗಾಗಲು ಸಾಧ್ಯವಿದೆ, ಅದೇನೂ ದೊಡ್ಡ ವಿಷಯವಲ್ಲ, ಎಲ್ಲವನ್ನೂ ಸ್ಟ್ರೀಮ್ ಲೈನ್ ಮಾಡಲಾಗುತ್ತದೆ ಎಂದು ಹೇಳಿದ ಅವರು ತಮ್ಮ ಇಲಾಖೆಯಲ್ಲಿ ತಾನು ಒಂದು ಟ್ರಾನ್ಸ್ ಫರ್ ಕೂಡ ಮಾಡಿಲ್ಲ ಎಂದರು. ವರ್ಗಾವಣೆ ನಡೆಯುತ್ತಿರುವ ಬಗ್ಗೆ ಕುಮಾರಸ್ವಾಮಿಯವರಲ್ಲಿ ಏನಾದರೂ ಮಾಹಿತಿ ಇದ್ದರೆ ದಯವಿಟ್ಟು ನೀಡಲಿ, ಅವರಿಗೆ ಆ ಹಕ್ಕಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.