ಕುಮಾರಸ್ವಾಮಿ ಹಠ ಮಾಡದಿದ್ದರೆ ಯೋಗೇಶ್ವರ್ ಪಕ್ಷಬಿಟ್ಟು ಹೋಗುತ್ತಿರಲಿಲ್ಲ: ಪ್ರೀತಂ ಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Oct 23, 2024 | 5:50 PM

ಯೋಗೇಶ್ವರ್ ಇಲ್ಲದ ಕಾರಣ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಾರದು ಅಂತೇನಿಲ್ಲ, ಆದರೆ ಕುಮಾರಸ್ವಾಮಿಯರು ಮುಂಚೂಣಿಯಲ್ಲಿದ್ದು ಎನ್​ಡಿಎ ಅಭ್ಯರ್ಥಿಯನ್ನು ಗೆಲ್ಲಿಸಬೇಕು, ಯಾಕೆಂದರೆ ಅದು ಅವರು ಪ್ರತಿನಿಧಿಸಿದ ಕ್ಷೇತ್ರ, ಅವರಿಗೆ ಶಕ್ತಿ ತುಂಬಲು ಬಿಜೆಪಿ ನಾಯಕರು ಬದ್ಧರಾಗಿದ್ದಾರೆ ಎಂದು ಪ್ರೀತಂ ಗೌಡ ಹೇಳಿದರು.

ಬೆಂಗಳೂರು: ಸಿಪಿ ಯೋಗೇಶ್ವರ್ ಬಿಜೆಪಿಯನ್ನು ಬಿಟ್ಟು ಹೋಗುವಂತಾಗಿದ್ದಕ್ಕೆ ಪಕ್ಷದ ನಾಯಕರು ಹೆಚ್ ಡಿ ಕುಮಾರಸ್ವಾಮಿಯನ್ನು ದೂರುವುದು ಶುರುವಾಗಿದೆ. ಪ್ರಸ್ತುತ ಸ್ಥಿತಿ ಯಾಕೆ ನಿರ್ಮಾಣವಾಯಿತು ಅಂತ ಪರಾಮರ್ಶೆ ಮಾಡಬೇಕಿದೆ, ಯೋಗೇಶ್ವರ್ ಪಕ್ಷ ಬಿಟ್ಟುಹೋಗಿರುವುದಕ್ಕೆ ಅವರು ಸರಿಯಿರಲಿಲ್ಲ ಅನ್ನೋದು ಸರಿಯಲ್ಲ, ಚನ್ನಪಟ್ಟಣದಲ್ಲಿ ಅವರು ಗೆಲ್ಲುವ ಅಭ್ಯರ್ಥಿಯಾಗಿದ್ದರು ಮತ್ತು ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಾಢ್ಯವಾಗಿ ಬೆಳೆಯಬೇಕು ಅಂತ ಅಂದುಕೊಂಡವರಲ್ಲಿ ಅವರು ಕೂಡ ಒಬ್ಬರಾಗಿದ್ದರು ಎಂದು ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಪ್ರೀತಂ ಜೆ ಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯೋಗೇಶ್ವರ್ ಒಬ್ಬ ಫ್ರಾಡ್, ಸೈನಿಕ ಅಂತ ಕರೆಯೋದು ಆ ಸಮುದಾಯಕ್ಕೆ ಅವಮಾನ: ಹೆಚ್ ವಿಶ್ವನಾಥ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.