ನನ್ನ ಹೇಳಿಕೆಯಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್, ಗೃಹ ಸಚಿವ

|

Updated on: Apr 20, 2024 | 12:08 PM

ತಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ, ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದು, ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಪರಮೇಶ್ವರ್ ಹೇಳಿದ್ದರು.

ಬೆಂಗಳೂರು: ಗುರುವಾರದಂದು ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆಗಿರುವ ಹತ್ಯೆ ಎಂದು ಹೇಳಿದ್ದಕ್ಕೆ ಯುವತಿಯ ತಂದೆ-ತಾಯಿ (Neha parents) ಮತ್ತು ಹುಬ್ಬಳ್ಳಿ ಮಹಿಳೆಯರ ತೀವ್ರ ಅಕ್ರೋಷಕ್ಕೆ ಒಳಗಾಗಿದ್ದ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ವಿಷಾದ ವ್ತಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಮಾಧ್ಯ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ತನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸದಸ್ಯರು ತಮ್ಮ ನಿವಾಸಕ್ಕೆ ಮುತ್ತಿಗೆ ಹಾಕುವ ವಿಷಯದಲ್ಲಿ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ಅವರು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ; ತಾನಾಗಲೀ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಲೀ ಜವಾಬ್ದಾರಿಯುತ ಸ್ಥಾನಗಳಲ್ಲಿ ಇರುವವರು, ನಾವು ಹಗುರವಾದ ಹೇಳಿಕೆಗಳನ್ನು ನೀಡಲಾಗಲ್ಲ, ತನಗಿದ್ದ ಮಾಹಿತಿಯನ್ನು ಆಧರಿಸಿ ನಿನ್ನೆ ಹೇಳಿಕೆ ನೀಡಿದ್ದು, ತನಿಖೆ ನಡೆಯುತ್ತಿದೆ ಮತ್ತು ಅದು ಪೂರ್ತಿಗೊಂಡ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನನ್ನ ಮಗನಿಗೆ ನೇಹಾ ಪ್ರಪೋಸ್​ ಮಾಡಿದ್ದಳು: ಆರೋಪಿ ಫಯಾಜ್ ತಾಯಿ, ವಿಡಿಯೋ ನೋಡಿ