ಅಧಿಕಾರಿಗಳು ಕಮೀಶನ್ ಕೇಳಿದ್ದರೆ ಕೆಂಪಣ್ಣನವರು ನಾಗಮೋಹನ್ ದಾಸ್ ಸಮಿತಿಗೆ ದೂರು ಸಲ್ಲಿಸಲಿ: ಸಿದ್ದರಾಮಯ್ಯ

Updated on: Feb 09, 2024 | 3:00 PM

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ತನಿಖೆ ಮಾಡಲು ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶ ಹೆಚ್ ಎನ್ ನಾಗಮೋಹನ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಕೆಂಪಣ್ಣನವರಾಗಲೀ ಬೇರೆ ಯಾರೇ ಗುತ್ತಿಗೆದಾರನಾಗಲೀ ಆಯೋಗಕ್ಕೆ ದೂರು ಸಲ್ಲಿಸಲು ಮುಕ್ತರಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗ: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಮತ್ತು ಅವರ ಆರೋಪಗಳು ಮತ್ತೇ ಮುನ್ನೆಲೆಗೆ ಬಂದಿವೆ. ಈ ಬಾರಿ ಅವರು ಕಾಂಗ್ರೆಸ್ ಶಾಸಕರು ಮತ್ತು ಅಧಿಕಾರಿಗಳ ಮೇಲೆ 40 ಪರ್ಸೆಂಟ್ ಕಮೀಶನ್ (40% commission) ಕೇಳುವ ಆರೋಪ ಮಾಡುತ್ತಿದ್ದಾರೆ. ಏನ್ಸಾರ್ 40 ಪರ್ಸೆಂಟ್ ಕಮೀಶನ್ ಆರೋಪವನ್ನು ಬಿಜೆಪಿ ಸರ್ಕಾರದ ವಿರುದ್ಧ ಮಾಡಿ ಆಧಿಕಾರಕ್ಕೆ ಬಂದ ನೀವು ಸಹ ಅದೇ ದಾರಿಯಲ್ಲಿ ಸಾಗುತ್ತಿದ್ದೀರಾ ಅಂತ ಇವತ್ತು ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡುಕದೆ ಪ್ರತಿಕ್ರಿಯೆ ನೀಡಿದರು. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳನ್ನು ತನಿಖೆ ಮಾಡಲು ನಿವೃತ್ತ ಹೈ ಕೋರ್ಟ್ ನ್ಯಾಯಾಧೀಶ ನಾಗಮೋಹನ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ. ಕೆಂಪಣ್ಣನವರಾಗಲೀ ಬೇರೆ ಯಾರೇ ಗುತ್ತಿಗೆದಾರನಾಗಲೀ ಆಯೋಗಕ್ಕೆ ದೂರು ಸಲ್ಲಿಸಲು ಮುಕ್ತರಾಗಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ, ಅಧಿಕಾರಿಗಳು ಕಮೀಶನ್ ಡಿಮ್ಯಾಂಡ್ ಮಾಡಿದ್ದರೂ ಕೆಂಪಣ್ಣನವರು ಆಯೋಗಕ್ಕೆ ದೂರು ಸಲ್ಲಿಸಲು ಸ್ವತಂತ್ರರು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More