Assembly Polls: ಸರ್ಕಾರ ರಚಿಸುವ ಅವಕಾಶ ನೀಡಿದರೆ ಚಿಕಿತ್ಸೆಗಾಗಿ ಹಣ ವ್ಯಯಿಸದಂಥ ವ್ಯವಸ್ಥೆ ಜಾರಿಗೆ ತರುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2023 | 3:11 PM

ಕುಮಾರಸ್ವಾಮಿಯವರು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿಂದು ಅನಾರೋಗ್ಯದ ನಿಮಿತ್ತ ಧನಸಹಾಯ ಕೇಳಿದ ವ್ಯಕ್ತಿಯೊಬ್ಬನಿಗೆ ಸಹಾಯ ಮಾಡುವ ಭರವಸೆಯನ್ನು ಸಾರ್ವಜನಿಕವಾಗಿ ನೀಡಿದರು.

ಬೆಂಗಳೂರು: ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆಯ ಮುಂದಾಳತ್ವವಹಿಸಿರುವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ಮಂಗಳವಾರ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಓಡಾಡುವಾಗ ಅನಾರೋಗ್ಯದ ನಿಮಿತ್ತ ಧನಸಹಾಯ ಕೇಳಿದ ವ್ಯಕ್ತಿಯೊಬ್ಬನಿಗೆ ಸಹಾಯ ಮಾಡುವ ಭರವಸೆಯನ್ನು ಸಾರ್ವಜನಿಕವಾಗಿ ನೀಡಿದರು. ಆದರೆ ಅದಕ್ಕೂ ಮೊದಲು ಅವರು ತಮಗೆ ಪ್ರತಿದಿನ ಚಿಕಿತ್ಸೆಗಾಗಿ ನೆರವು ಕೋರಿ ಪತ್ರ ಬರೆಯತ್ತಾರೆ, ಆದರೆ ತಾನೊಬ್ಬ ರೈತ ಮತ್ತು ತೋಟವೊಂದನನ್ನು ಬಿಟ್ಟರೆ ಬೇರೇನೂ ಇಲ್ಲ, ಹಾಗಾಗಿ ಎಲ್ಲರಿಗೆ ಸಹಾಯ (monetary help) ಮಾಡುವುದು ನನ್ನಿಂದಾಗದು ಎಂದು ಹೇಳಿದರು. ಒಂದು ಪಕ್ಷ ಮತದಾರರು ತಮಗೆ ಸರ್ಕಾರ ರಚಿಸುವ ಅವಕಾಶ ನೀಡಿದರೆ, ಚಿಕಿತ್ಸೆಗಾಗಿ ಒಂದೇ ರೂಪಾಯಿ ಸಹ ಖರ್ಚು ಮಾಡದಂಥ ವ್ಯವಸ್ಥೆ (cashless treatment) ಜಾರಿಗೆ ತರುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.