ಪ್ರಜ್ವಲ್ ರೇವಣ್ಣ ಹಾಜರಾಗದಿದ್ದರೆ ಎಸ್ಐಟಿ ಅಧಿಕಾರಿಗಳು ಅವರಿದ್ದಲ್ಲಿಗೆ ಹೋಗಿ ಅರೆಸ್ಟ್ ಮಾಡುತ್ತಾರೆ: ಜಿ ಪರಮೇಶ್ವರ್
ಒಂದು ಪಕ್ಷ ಅವಕಾಶವಿಲ್ಲ ಅಂತಾದರೆ ಪೊಲೀಸ್ ಅಧಿಕಾರಿಗಳು ಪ್ರಜ್ವಲ್ ಅರೆಸ್ಟ್ ಮಾಡಿ ಭಾರತಕ್ಕೆ ತರಲು ಅವರಿರುವ ಸ್ಥಳಕ್ಕೆ ಹೋಗಲಿದ್ದಾರೆ ಎಂದು ಹೇಳಿದರು. ಹಾಸನದಲ್ಲಿ ಮತ್ತೊಬ್ಬ ಸಂತ್ರಸ್ತೆ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಅವರ ದೂರಿನ ವಿವರಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ ಎಂದು ಗೃಹ ಸಚಿವ ಹೇಳಿದರು.
ಕಲಬುರಗಿ: ನಗರದಲ್ಲಿಂದು ಆಯೋಜಿಸಿದ ಸುದ್ದಿಗೋಷ್ಟಿಯಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣದ ಬಗ್ಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರು, ಅರೋಪಿಯು ವಿದೇಶಕ್ಕೆ ಹೋಗಿರುವ ವಿಷಯ ಗೊತ್ತಾಗುತ್ತಿದ್ದಂತೆಯೇ ಎಲ್ಲ ಏರ್ಪೋರ್ಟ್ ಗಳಿಗೆ ಮಾಹಿತಿ ರವಾನಿಸಿರುವ ಎಸ್ ಐಟಿ ಅಧಿಕಾರಿಗಳು ಲುಕೌಟ್ ನೋಟಿಸನ್ನು (look out notice) ಜಾರಿ ಮಾಡಿದ್ದಾರೆ ಎಂದು ಹೇಳಿದರು. ಈ ನಡುವೆ ಪ್ರಜ್ವಲ್ ವಕೀಲ ಎಸ್ಐಟಿ ಗೆ ಪತ್ರವೊಂದನ್ನು ಬರೆದು ತಮ್ಮ ಕಕ್ಷಿದಾರ ಅವರ ಮುಂದೆ ಹಾಜರಾಗಲು 6 ದಿನಗಳ ಸಮಯ ಕೇಳಿದ್ದಾರೆ, ಆದರೆ ಕಾನೂನು ವ್ಯಾಪ್ತಿಯಲ್ಲಿ ಹಾಗೆ ಸಮಯಾವಕಾಶ ನೀಡಲು ಬರಲ್ಲ, ಅದರೂ ಅಧಿಕಾರಿಗಳು ಕಾನೂನು ಪರಿಣಿತರ ಸಲಹೆಯನ್ನು ಪಡೆಯುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು. ಒಂದು ಪಕ್ಷ ಅವಕಾಶವಿಲ್ಲ ಅಂತಾದರೆ ಪೊಲೀಸ್ ಅಧಿಕಾರಿಗಳು ಪ್ರಜ್ವಲ್ ಅರೆಸ್ಟ್ ಮಾಡಿ ಭಾರತಕ್ಕೆ ತರಲು ಅವರಿರುವ ಸ್ಥಳಕ್ಕೆ ಹೋಗಲಿದ್ದಾರೆ ಎಂದು ಹೇಳಿದರು. ಹಾಸನದಲ್ಲಿ ಮತ್ತೊಬ್ಬ ಸಂತ್ರಸ್ತೆ ಮುಂದೆ ಬಂದು ದೂರು ದಾಖಲಿಸಿದ್ದಾರೆ. ಅವರ ದೂರಿನ ವಿವರಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ ಎಂದು ಗೃಹ ಸಚಿವ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನನ್ನ ಹೇಳಿಕೆಯಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್, ಗೃಹ ಸಚಿವ