ದರ್ಶನ್ ಗೆ ರಾಜಾತಿಥ್ಯ; ಹಿರಿಯ ಅಧಿಕಾರಿಗಳೂ ಶಾಮೀಲಾಗಿದ್ದರೆ ಅವರ ವಿರುದ್ಧ ಕ್ರಮ: ಸಿದ್ದರಾಮಯ್ಯ

|

Updated on: Aug 26, 2024 | 3:15 PM

ಜೈಲಿನಲ್ಲಿ ನಟ ದರ್ಶನ್ ಮತ್ತು ಬೇರೆ ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ ನೀಡಿರುವುದಕ್ಕೆ ಸಂಬಂಧಿಸಿದಂತೆ 7 ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಮತ್ತು ಉನ್ನತಾಧಿಕಾರಿಗಳ ಪಾತ್ರ ಕಂಡು ಬಂದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಎಗ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಚಿತ್ರನಟ ದರ್ಶನ್ ಗೆ ಸಿಗುತ್ತಿರುವ ಸ್ಪೆಷಲ್ ಟ್ರೀಟ್ಮೆಂಟ್ ಬಗ್ಗೆ ಮಾತಾಡಿದರು. ಅದು ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಕೆಲಸ, ಅವರು ದುಡ್ಡು ಪಡೆದು ಕೆಲ ಖೈದಿಗಳ ನೆರವಿಗೆ ನಿಂತಿದ್ದಾರೆಯೇ ಅನ್ನೋದನ್ನ ತನಿಖೆ ಮಾಡಿಸಲಾಗುತ್ತದೆ, ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಜೈಲಿಗೆ ಭೇಟಿ ನೀಡುವಂತೆ ಹೇಳಿದ್ದೇನೆ, ಅವರು ಮಾಹಿತಿ ಸಂಗ್ರಹಿಸಿದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ, ದರ್ಶನ್  ರನ್ನು ಬೇರೆ ಜೈಲಿಗೆ ವರ್ಗಾಯಿಸುವ ಯೋಚನೆ ಇದೆ ಎಂದು ಸಿಎಂ ಹೇಳಿದರು.  ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸಿದ್ದರಾಮಯ್ಯ ಸರ್ಕಾರ ಬಡವರ ಪರ ಇಲ್ಲ ದುಡ್ಡಿದ್ದವರ ಪರವಿದೆ ಅಂತ ಮಾಡಿರುವ ಅರೋಪಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಯಾರ ಪರವಾಗಿದ್ದಾರೆ? ಬಡವರಿಗಾಗಿ ಕೆಲಸ ಮಾಡುತ್ತಿದ್ದಾರೆಯೇ? ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿರುವ ಸರ್ಕಾರ ಜನರ ಪರವಾಗಿಲ್ಲವೋ? ಅವರು ಬಡವರಿಗಾಗಿ ಮಾಡಿರುವುದಾದರೂ ಏನು? ಬಡವರ ಬಗ್ಗೆ ಮಾತಾಡುವ ನೈತಿಕತೆ ಅವರಿಗಿದೆಯಾ? ಎಂದು ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿದ್ದರಾಮಯ್ಯ ನಂತರ ಸಚಿವ ಎಂಬಿ ಪಾಟೀಲ್​ಗೂ ಸಂಕಷ್ಟ, ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಅನುಮತಿ ಕೋರಿದ ಆರ್​ಟಿಐ ಕಾರ್ಯಕರ್ತ

Follow us on