ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರಿಟ್ಟರೆ ನಮ್ಮದೇನೂ ಅಭ್ಯಂತರವಿಲ್ಲ: ಡಿಕೆ ಶಿವಕುಮಾರ್
ಲಭ್ಯವಾಗಿರುವ ಮಾಹಿತಿಯ ಪ್ರಕಾರ ಆ ರೈತರಲ್ಲಿ ಹಲವಾರು ಜನರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಅಥವಾ ಸ್ವಲ್ಪ ಮಾತ್ರ ಸಿಕ್ಕಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ರೈತರಿಗೆ ಪರಿಹಾರ ಧನ ನೀಡಬೇಕು ಎಂದು ಶಿವಕುಮಾರ್ ಹೇಳಿದರು.
ಶಿವಮೊಗ್ಗ: ದಕ್ಷಿಣ ಕರ್ನಾಟಕದಲ್ಲಿ ಪ್ರಜಾಧ್ವನಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಶಿವಮೊಗ್ಗದಲ್ಲಿ ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪನವರ (BS Yediyurappa) ಹೆಸರಿಟ್ಟರೆ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದರು. ಆದರೆ, ಏರ್ಪೋರ್ಟ್ ನಿರ್ಮಾಣಕ್ಕಾಗಿ ಅನೇಕ ರೈತರ ಜಮೀನುಗಳನ್ನು ಸ್ವಾಧೀನ (acquisition) ಮಾಡಿಕೊಳ್ಳಲಾಗಿದೆ. ಆದರೆ, ಲಭ್ಯವಾಗಿರುವ ಮಾಹಿತಿಯ ಪ್ರಕಾರ ಆ ರೈತರಲ್ಲಿ ಹಲವಾರು ಜನರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಅಥವಾ ಸ್ವಲ್ಪ ಮಾತ್ರ ಸಿಕ್ಕಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ರೈತರಿಗೆ ಪರಿಹಾರ ಧನ ನೀಡಬೇಕು ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
