ಒಡಂಬಡಿಕೆಯಾಗಿದ್ದರೆ ಸಿದ್ದರಾಮಯ್ಯನವರು ಶಿವಕುಮಾರ್​ಗೆ ಅಧಿಕಾರ ಬಿಟ್ಟುಕೊಡಬೇಕು: ಶ್ರೀಶೈಲ ಜಗದ್ಗುರುಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Jul 16, 2025 | 11:49 AM

ಹಿಂದೂಗಳ ಹತ್ಯೆಯಾಗುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ ಮತ್ತು ಅದು ಖಂಡನೀಯ, ನಮ್ಮ ದೇಶ ಹಲವಾರು ಸಂಪ್ರದಾಯ ಮತ್ತು ಸಂಸ್ಕತಿಗಳ ನೆಲೆವೀಡಾಗಿದೆ, ಪರಧರ್ಮ ಸಹಿಷ್ಣುತೆ ಎಲ್ಲ ಭಾರತೀಯರ ಬದುಕಿನ ಮಾರ್ಗವಾಗಿದೆ ಧರ್ಮದ ಹಿನ್ನೆಲೆಯಲ್ಲಿ ದ್ವೇಷವನ್ನು ಪಸರಿಸುವುದು ಮತ್ತು ಸಾಧಿಸುವುದು ಒಪ್ಪತಕ್ಕ ಮಾತಲ್ಲ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದರು.

ಬಾಗಲಕೋಟೆ, ಜುಲೈ 16: ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ ನಡುವೆ ಏನು ಒಡಂಬಡಿಕೆಯಾಗಿದೆಯೋ ಗೊತ್ತಿಲ್ಲ, ಹಾಗಾಗಿ ಅಧಿಕಾರ ಹಂಚಿಕೆ ವಿಷಯದಲ್ಲಿ ಮಾತಾಡೋದು ಸೂಕ್ತ ಅಲ್ಲ ಎಂದು ಶ್ರೀಶೈಲ ಜಗದ್ಗುರು ಡಾ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಬಾಗಲಕೋಟೆಯಲ್ಲಿ ಮಾಧ್ಯಮದವರ ಜೊತೆ ಮಾತಾಡಿದ ಅವರು ಒಂದು ವೇಳೆ ಒಡಂಬಡಿಕೆಯಾಗಿದ್ದೇ ನಿಜವಾದರೆ, ಸಿದ್ದರಾಮಯ್ಯನವರು ಸ್ಥಾನವನ್ನು ಶಿವಕುಮಾರ್​ಗೆ ಬಿಟ್ಟುಕೊಡಬೇಕು ಎಂದು ಹೇಳಿದ ಸ್ವಾಮೀಜಿ ಇಬ್ಬರೂ ರಾಜಕೀಯ ಮುತ್ಸದ್ದಿಗಳು ಮತ್ತು ಅಪಾರ ಅನುಭವವುಳ್ಳವರು ಎಂದರು. ರಾಜಕಾರಣಿಗಳು ಯಾರೇ ಆಗಿರಲಿ, ಕುರ್ಚಿಗಾಗಿ ಬಡಿದಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: kodimatha Swamiji Predictions: ರಾಜಕಾರಣ, ಪ್ರಕೃತಿ ವಿಕೋಪ, ಯುದ್ಧದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.