ಭಯೋತ್ಪಾದಕ ಚಟುವಟಿಕೆ ನಿಲ್ಲಿಸಲಾಗದಿದ್ದರೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ ವಿಧಾನಸಭೆಯನ್ನು ವಿಸರ್ಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್

|

Updated on: Mar 02, 2024 | 3:05 PM

ಈ ಸರ್ಕಾರಕ್ಕೆ ಜನರ ಪ್ರಾಣಗಳ ಬಗ್ಗೆ ಕಾಳಜಿಯೇ ಇದ್ದಂತಿಲ್ಲ, ಕೇವಲ ತನ್ನ ಗ್ಯಾರಂಟಿಗಳ ಬಗ್ಗೆ ಹೇಳಿಕೊಂಡು ಸಾಗಿದೆ; ಅದರ ಗ್ಯಾರಂಟಿಗಳ ಭರದಲ್ಲಿ ಜನರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ ಎಂದರು. ಸಿದ್ದರಾಮಯ್ಯನವರಿಗೆ ಭಯೋತ್ಪಾದಕ ಕೃತ್ಯಗಳನ್ನು ನಿಲ್ಲಿಸುವುದು ಸಾಧ್ಯವಾಗುತ್ತಿಲ್ಲ ಅಂತಾದರೆ ರಾಜೀನಾಮೆ ಸಲ್ಲಿಸಿ ವಿಧಾನಸಭೆಯನ್ನು ವಿಸರ್ಜಿಸಬೇಕು ಎಂದು ಬಿಜೆಪಿ ಶಾಸಕ ಹೇಳಿದರು.

ವಿಜಯಪುರ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು (terrorism activities) ನಿಲ್ಲಿಸಲಾಗದಿದ್ದರೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ ಮನೆಗೆ ಹೋಗಬೇಕೆಂದು ಖಾರವಾಗಿ ಹೇಳಿದರು. ಸಿದ್ದರಾಮಯ್ಯ ಸಂಪುಟದ ಪ್ರಮುಖ ಸಚಿವರೊಬ್ಬರು ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು (Brand Bengaluru) ಮಾಡುವ ಮಾತಾಡಿದ್ದರು. ಆಗಲೇ ತಾನು ಆದು ಬ್ರ್ಯಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು (Bomb Bengaluru) ಅಗಲಿದೆ ಎಂದಿದ್ದೆ, ಅದೀಗ ಸಾಬೀತಾಗುತ್ತಿದೆ ಎಂದು ಯತ್ನಾಳ್ ಹೇಳಿದರು. ಹಿಂದೆ ಕುಕ್ಕರ್ ಬ್ಲಾಸ್ಟ್ ಪ್ರಕರಣ ನಡೆದಾಗಲೂ ಸಿದ್ದರಾಮಯ್ಯ ಅದನ್ನು ಉಡಾಫೆ ಮಾಡಿದ್ದರು, ನಂತರ ಅದು ಭಯೋತ್ಪಾದಕ ಚಟಿವಟಿಕೆಗಳ ಭಾಗ ಎಂದು ಪ್ರೂವ್ ಆಯಿತು ಎಂದ ಯತ್ನಾಳ್ ಈ ಸರ್ಕಾರಕ್ಕೆ ಜನರ ಪ್ರಾಣಗಳ ಬಗ್ಗೆ ಕಾಳಜಿಯೇ ಇದ್ದಂತಿಲ್ಲ, ಕೇವಲ ತನ್ನ ಗ್ಯಾರಂಟಿಗಳ ಬಗ್ಗೆ ಹೇಳಿಕೊಂಡು ಸಾಗಿದೆ; ಅದರ ಗ್ಯಾರಂಟಿಗಳ ಭರದಲ್ಲಿ ಜನರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ ಎಂದರು. ಸಿದ್ದರಾಮಯ್ಯನವರಿಗೆ ಭಯೋತ್ಪಾದಕ ಕೃತ್ಯಗಳನ್ನು ನಿಲ್ಲಿಸುವುದು ಸಾಧ್ಯವಾಗುತ್ತಿಲ್ಲ ಅಂತಾದರೆ ರಾಜೀನಾಮೆ ಸಲ್ಲಿಸಿ ವಿಧಾನಸಭೆಯನ್ನು ವಿಸರ್ಜಿಸಬೇಕು ಎಂದು ಬಿಜೆಪಿ ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಶಂಕಿತನ ಬಗ್ಗೆ ವಿವರಣೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ