Chikkaballapura | ಸಿದ್ದರಾಮಯ್ಯ ಹೇಳಿದ್ದನ್ನು ಆಶೀರ್ವಾದವಾಗಿ ಸ್ವೀಕರಿಸುವೆ: ಡಾ ಕೆ ಸುಧಾಕರ್, ಆರೋಗ್ಯ ಸಚಿವ
ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ನೀಡಲಾಗಿದೆ. ಅದರ ಆಧಾರದ ಮೇಲೆಯೇ ಬಿಜೆಪಿ ಪುನಃ ಅಧಿಕಾರಕ್ಕೆ ಬಂದು ಮತ್ತಷ್ಟು ಉತ್ತಮ ಯೋಜನೆಗಳನ್ನು ಜನರಿಗೆ ನೀಡಲಿದೆ ಎಂದು ಸಚಿವರು ಹೇಳಿದರು.
ಚಿಕ್ಕಬಳ್ಳಾಪುರ: ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪೂಜೆ ಸಲ್ಲಿಸಿದ ಬಳಿಕ ತಮಗಾಗಿ ಕಾಯುತ್ತಿದ್ದ ಮಾಧ್ಯಮದವರೊಡನೆ ಮಾತಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ (Dr K Sudhakar) ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ತಮ್ಮನ್ನು ‘ಸಿಎಮ್ ಸುಧಾಕರ್’ (CM Sudhakar) ಅಂತ ಸಂಬೋಧಿಸಿರುವದಕ್ಕೆ ಪ್ರತಿಕ್ರಿಯಿಸಿ, ಅವರು ಬಾಯಿ ತಪ್ಪಿ ಹಾಗೆ ಹೇಳಿರುತ್ತಾರೆ, ಅಥವಾ ಶುದ್ಧ ಮನಸ್ಸಿನಿಂದಲೇ ಹಾರೈಸಿದ್ದರೆ ಅದನ್ನು ಆಶೀರ್ವಾದ ರೂಪದಲ್ಲಿ ಸ್ವೀಕರಿಸುವುದಾಗಿ ಹೇಳಿದರು. ನಂತರ ತಮ್ಮ ಸರ್ಕಾರ ಬಗ್ಗೆ ಮಾತಾಡಿದ ಅವರು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ನೀಡಲಾಗಿದೆ. ಅದರ ಆಧಾರದ ಮೇಲೆಯೇ ಬಿಜೆಪಿ ಪುನಃ ಅಧಿಕಾರಕ್ಕೆ ಬಂದು ಮತ್ತಷ್ಟು ಉತ್ತಮ ಯೋಜನೆಗಳನ್ನು ಜನರಿಗೆ ನೀಡಲಿದೆ ಎಂದು ಸಚಿವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ