ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಹದ್ದುಮೀರಿದರೆ ಅದಕ್ಕೆ ಸರ್ಕಾರವೇ ಹೊಣೆ: ಬಿವೈ ವಿಜಯೇಂದ್ರ
ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ಉಗ್ರರ ದಾಳಿ ನಡೆಯುವುದಕ್ಕೆ ಗುಪ್ತಚರ ವಿಭಾಗದ ವೈಫಲ್ಯವೇ ಕಾರಣ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳುತ್ತಾರೆ, ಮಂಗಳೂರಲ್ಲಿ ಅಬ್ದುಲ್ ರೆಹಮಾನ್ ಹತ್ಯೆ ನಡೆದಾಗ ಕರ್ನಾಟಕದ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ರಾಜ್ಯ ಸರ್ಕಾರ ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು ಎಂದು ವಿಜಯೇಂದ್ರ ಹೇಳಿದರು.
ಮಂಡ್ಯ, ಮೇ 31: ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಬಸವ ಜಯಂತಿ (Basava Jayanti) ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಉಲ್ಲೇಖಿಸುತ್ತಾ, ಸ್ಥಳೀಯ ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಸರ್ಕಾರವು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸುತ್ತಿದೆ, ಕಾಂಗ್ರೆಸ್ ಸರ್ಕಾರದ ಅತಿರೇಕ ವರ್ತನೆಯನ್ನು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಅವರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಹೇಳಿದರು. ಕರಾವಳಿ ಪ್ರಾಂತ್ಯದಲ್ಲಿ ಪರಿಸ್ಥಿತಿ ಹತೋಟಿ ತಪ್ಪಿದರೆ ಅದಕ್ಕೆ ಮುಖ್ಯಮಂತ್ರಿ, ಗೃಹ ಸಚಿವ, ಪೊಲೀಸರು ಮತ್ತು ಸರ್ಕಾರವೇ ಕಾರಣ ಎಂದು ವಿಜಯೇಂದ್ರ ಹೇಳಿದರು.
ಇದನ್ನೂ ಓದಿ: ಬಿಜೆಪಿಗೆ 160 ಸೀಟು ಸಿಗುತ್ತವೆ ಅಂತ ವಿಜಯೇಂದ್ರ ಬೋಗಸ್ ಸಮೀಕ್ಷೆ ಮಾಡಿಸಿದ್ದಾರೆ: ಬಸನಗೌಡ ಯತ್ನಾಳ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ