ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್ರನ್ನು ಬಂಧಿಸಲಾಗುವುದು: ಪರಮೇಶ್ವರ್
ಚನ್ನಪಟ್ಟಣ ಸೇರಿದಂತೆ ಉಪ ಚುನಾವಣೆ ನಡೆಯುವ ಎಲ್ಲ ಮೂರು ಕ್ಷೇತ್ರಗಳಿಗೆ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದೆ ಮತ್ತು ಅಭ್ಯರ್ಥಿಯ ಆಯ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಡುವ ಶಿಫಾರಸ್ಸುಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ವಿರೋಧ ಪಕ್ಷದ ನಾಯಕರು ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧವೂ ನಾಲಗೆ ಹರಿಬಿಡುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು ನ್ಯಾಯಾಲಯ ಆದೇಶಿಸಿದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಉಪ ಚುನಾವಣೆಯಲ್ಲಿ ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಮಡಿಲಿಗೆ ಹಾಕಿಕೊಳ್ಳಲಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ದಲಿತ ನಾಯಕರ ನಡುವೆ ಮಾತುಕತೆ ನಡೆಯಲಿಲ್ಲ: ಜಿ ಪರಮೇಶ್ವರ್