ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್​ರನ್ನು ಬಂಧಿಸಲಾಗುವುದು: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 18, 2024 | 12:00 PM

ಚನ್ನಪಟ್ಟಣ ಸೇರಿದಂತೆ ಉಪ ಚುನಾವಣೆ ನಡೆಯುವ ಎಲ್ಲ ಮೂರು ಕ್ಷೇತ್ರಗಳಿಗೆ ಪಕ್ಷದ ಹೈಕಮಾಂಡ್ ಅಭ್ಯರ್ಥಿಗಳ ಹೆಸರುಗಳನ್ನು ಸೂಚಿಸಲಿದೆ ಮತ್ತು ಅಭ್ಯರ್ಥಿಯ ಆಯ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಡುವ ಶಿಫಾರಸ್ಸುಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ವಿರೋಧ ಪಕ್ಷದ ನಾಯಕರು ಸೇರಿದಂತೆ ತಮ್ಮ ಪಕ್ಷದ ನಾಯಕರ ವಿರುದ್ಧವೂ ನಾಲಗೆ ಹರಿಬಿಡುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು ನ್ಯಾಯಾಲಯ ಆದೇಶಿಸಿದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಉಪ ಚುನಾವಣೆಯಲ್ಲಿ ಎಲ್ಲ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಮಡಿಲಿಗೆ ಹಾಕಿಕೊಳ್ಳಲಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಖ್ಯಮಂತ್ರಿ ಬದಲಾವಣೆ ಬಗ್ಗೆ ದಲಿತ ನಾಯಕರ ನಡುವೆ ಮಾತುಕತೆ ನಡೆಯಲಿಲ್ಲ: ಜಿ ಪರಮೇಶ್ವರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.