ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ನನ್ನ ಹೆಸರು ಸೂಚಿಸಿದರೆ ಬೇಡ ಅನ್ನಲಾಗುತ್ತದೆಯೇ? ಪ್ರಿಯಾಂಕ್ ಖರ್ಗೆ
ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬದಲಾವಣೆ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಅಂತ ಅವರು ಬೆಂಗಳೂರಲ್ಲಿ ಹೇಳಿದ್ದರು.
ಮೈಸೂರು: ಸಿದ್ದರಾಮಯ್ಯ (Siddaramaiah) ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ ಅಥವಾ ಇನ್ನೆರಡು ವರ್ಷಗಳ ಬಳಿಕ ಅವರನ್ನು ತೆರೆಮರೆಗೆ ಸರಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (DK Shivakumar) ಬಡ್ತಿ ನೀಡಲಾಗುತ್ತಾ? ಮಾಧ್ಯಮ ಪ್ರತಿನಿಧಿಗಳು ಮತ್ತೊಮ್ಮೆ ಈ ಪ್ರಶ್ನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಮೈಸೂರಲ್ಲಿ ಇಂದು ಕೇಳಿದರು. ಕೊಂಚ ಅಸಹನೆಯಿಂದ ಪ್ರತಿಕ್ರಿಯಿಸಿದ ಸಚಿವ, ಈ ಸಂಗತಿ ಕೇವಲ ನಾಲ್ವರಿಗೆ ಮಾತ್ರ ಗೊತ್ತು, ಇದಕ್ಕೂ ಮೊದಲು ಸಹ ತಾನದನ್ನು ಹೇಳಿದ್ದೇನೆ ಎಂದರು. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬದಲಾವಣೆ ವಿಷಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ಗೊತ್ತು ಅಂತ ಅವರು ಬೆಂಗಳೂರಲ್ಲಿ ಹೇಳಿದ್ದರು. ಅದೇ ಮಾತನ್ನು ಮೈಸೂರಲ್ಲಿ ಪುನರಾವರ್ತಿಸಿದ ಪ್ರಿಯಾಂಕ್ ಖರ್ಗೆ, ಅದು ಹೈಕಮಾಂಡ್ ಸುಪರ್ದಿಗೆ ಬಿಟ್ಟ ವಿಚಾರ, ಹೈಕಮಾಂಡ್ ತನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸೂಚಿಸಿದರೆ ತಾನದಕ್ಕೆ ಬದ್ಧನಾಗಿರಬೇಕಾಗುತ್ತದೆ ಎಂದು ನಗುತ್ತಾ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ