Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನದು ಗಜಕೇಸರಿ ಯೋಗ, ನಾನು ಪ್ರಧಾನಿ ಆಗಬಹುದು: ಸಂಯುಕ್ತ ಪಾಟೀಲ್​

ನನ್ನದು ಗಜಕೇಸರಿ ಯೋಗ, ನಾನು ಪ್ರಧಾನಿ ಆಗಬಹುದು: ಸಂಯುಕ್ತ ಪಾಟೀಲ್​

ವಿವೇಕ ಬಿರಾದಾರ
|

Updated on: Apr 07, 2024 | 4:39 PM

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸಚಿವ ಶಿವಾನಂದ ಪಾಟೀಲ್​ ಅವರ ಪುತ್ರಿ ಸಂಯುಕ್ತಾ ಪಾಟೀಲ್​ ಸ್ಪರ್ಧಿಸುತ್ತಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ತುಂಬೆಲ್ಲ ಸಂಚಾರ ಮಾಡುತ್ತಾ ಮತಯಾಚಿಸುತ್ತಿದ್ದಾರೆ. ಇಂದು ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿಯಾಗುವ ಇಂಗಿತವನ್ನು ಸಂಯುಕ್ತ ಪಾಟೀಲ್​ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಸಚಿವ ಶಿವಾನಂದ ಪಾಟೀಲ್​ ಅವರ ಪುತ್ರಿ ಸಂಯುಕ್ತಾ ಪಾಟೀಲ್​ ಸ್ಪರ್ಧಿಸುತ್ತಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ತುಂಬೆಲ್ಲ ಸಂಚಾರ ಮಾಡುತ್ತಾ ಮತ ಯಾಚಿಸುತ್ತಿದ್ದಾರೆ. ಜೊತೆಗೆ ಅಲ್ಲಲ್ಲಿ ಕಾರ್ಯಕರ್ತರ ಸಭೆ ಮಾಡುತ್ತಿದ್ದಾರೆ. ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಇಂದು (ಏ.07) ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನನ್ನದು ಗಜಕೇಸರಿ ಯೋಗ, ನಾನು ಹುಟ್ಟಿದಾಗ ತಂದೆ ಶಾಸಕರಾದರು. ಚಿಕ್ಕವಳಿದ್ದಾಗ ಏನಾಗುತ್ತಿಯಾ ಅಂದರೆ ಪ್ರಧಾನಿ ಆಗುತ್ತೇನೆ ಅಂತಿದ್ದೆ. ಈಗ ಸಂಸದಳಾಗುವ ಅವಕಾಶ ಬಂದಿದೆ. ಮುಂದೆ‌ ನಾನು ಪ್ರಧಾನಿ ಆಗಬಹುದು ಎಂದು ಹೇಳುವ ಮೂಲಕ ಪ್ರಧಾನಿ ಹುದ್ದೆಗೆ ಏರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಒಂದು ಅವಕಾಶ ಕೊಡಿ ನಿಮ್ಮ ಜೀತದಾಳಾಗಿ ಕೆಲಸ ಮಾಡುತ್ತೇನೆ. ಮನೆ ಯಜಮಾನಿಗೆ ಸರ್ಕಾರ ತಲಾ 2 ಸಾವಿರ ಹಣ ನೀಡುತ್ತಿದೆ. ಪುರುಷರಿಗೆ ಕೊಟ್ರೆ ಸಂಜೆ ಯಾವ ಅಂಗಡಿಗೆ ಹೋಗುತ್ತೆ ಅಂತ ಗೊತ್ತಿದೆ ಎಂದರು.

ಸಂಯುಕ್ತಾ ಪಾಟಿಲ್ ರವಿವಾರ ಬಾಗಲಕೋಟೆಯ ನವನಗರದ ತರಕಾರಿ ಮಾರುಕಟ್ಟೆಯಲ್ಲಿ ಮತಯಾಚನೆ ಮಾಡಿದರು. ತರಕಾರಿ ವ್ಯಾಪಾರಸ್ಥ ಮಹಿಳೆಯರ ಬಳಿ ತೆರಳಿ ತಮಗೆ ಮತ ನೀಡುವಂತೆ ಮನವಿ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ