ಪ್ರಧಾನಿ ಮೋದಿಯವರನ್ನು ಕರೆಸಿ ಮಂಡ್ಯ ಜಿಲ್ಲೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ: ಕೆಸಿ ನಾರಾಯಣಗೌಡ, ಸಚಿವರು
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮಂಡ್ಯಗೆ ಕರೆಸಿ ಜಿಲ್ಲೆ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸ ಮಾಡುವುದಾಗಿ ಅವರು ಆಶ್ವಾಸನೆ ನೀಡಿದರು.
ಮಂಡ್ಯ: ಭಾರತೀಯ ಜನತಾ ಪಕ್ಷ (BJP) ಮಂಡ್ಯ ಜಿಲ್ಲೆಯಲ್ಲಿ ಹೇಳಿಕೊಳ್ಳುವಂಥ ಸಾಧನೆ ಮಾಡಿಲ್ಲ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯವೇ. ಕೆ ಆರ್ ಪೇಟೆ ಶಾಸಕ ಮತ್ತ ಸಚಿವ ಕೆಸಿ ನಾರಾಯಣಗೌಡರಿಗೆ (KC Narayana Gowda) ಅದು ಮತ್ತೂ ಚೆನ್ನಾಗಿ ಗೊತ್ತಿರುವ ವಿಷಯ. ಹಾಗಾಗೇ, ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತಾಡಿದ ಸಚಿವರು ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ 4 ಸ್ಥಾನಗಳನ್ನು ಗೆದ್ದರೆ ಇಡೀ ಭಾರತವನ್ನೇ ಗೆದ್ದಂತೆ ಎಂದು ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಮಂಡ್ಯಗೆ ಕರೆಸಿ ಜಿಲ್ಲೆ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸ ಮಾಡುವುದಾಗಿ ಅವರು ಆಶ್ವಾಸನೆ ನೀಡಿದರು.
Latest Videos