ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ: ಯತ್ನಾಳ್ಗೆ ಪ್ರದೀಪ್ ಈಶ್ವರ್ ಸವಾಲು
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಎಂಎಲ್ಎ ಪ್ರದೀಪ್ ಈಶ್ವರ್, ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಯತ್ನಾಳ್ಗೆ ಸವಾಲು ಹಾಕಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದ ಯತ್ನಾಳ್ ಅಲ್ಲಿಯ ರಸ್ತೆಯ ದುಸ್ಥಿತಿ ಕುರಿತು ಟೀಕೆ ಮಾಡಿದ್ದರು. ಇದಕ್ಕೆ ಪ್ರದೀಪ್ ಈಶ್ವರ್ ಯತ್ನಾಳ್ಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 6: ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಚಿಕ್ಕಬಳ್ಳಾಪುರದ ಎಂಎಲ್ಎ ಪ್ರದೀಪ್ ಈಶ್ವರ್, ‘ನಿಮ್ಮ ವಿರುದ್ಧ ಸ್ಪರ್ಧಿಸಲು ನಾನು ತಯಾರಿದ್ದೇನೆ. ನಿಮಗೆ ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ’ ಎಂದು ಯತ್ನಾಳ್ಗೆ ನೇರವಾಗಿ ಸವಾಲೆಸೆದಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದ ವಿಜಯಪುರ ಎಂಎಲ್ಎ ಯತ್ನಳ್, ಅಲ್ಲಿನ ರಸ್ತೆಯ ದುಸ್ಥಿತಿ ಬಗ್ಗೆ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರದೀಪ್ ಈಶ್ವರ್, ‘ನಾನು ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯ ಕೆಲಸ ಮಾಡಿದ್ದೇನೆ. ವಿಜಯಪುರವೇ ಯಾವುದೇ ಅಭಿವೃದ್ಧಿ ಕಂಡಿಲ್ಲ. ಅಲ್ಲಿನ ರಸ್ತೆಗಳ ದುಸ್ಥಿತಿಯನ್ನು ನಾನೂ ಹೇಳಬಲ್ಲೆ. ತಾಕತ್ತಿದ್ದರೆ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ’ ಎಂದು ಯತ್ನಾಳ್ಗೆ ನೇರವಾಗಿ ಸವಾಲು ಹಾಕಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
